ಸಾವಿನಲ್ಲೂ ಸಾರ್ಥಕತೆ ಮೆರೆದ ಅನಂತ್ ಸುಬ್ಬರಾವ್: ನಾಳೆ ನಿಮ್ಹಾನ್ಸ್ ಆಸ್ಪತ್ರೆಗೆ ದೇಹದಾನ

ಬೆಂಗಳೂರು: ಸಾರಿಗೆ ನೌಕರರ ಮುಖಂಡ ಹೆಚ್.ವಿ ಅನಂತ್ ಸುಬ್ಬರಾವ್ ಅವರು ಸಾರ್ಥಕತೆಯನ್ನು ಮೆರೆದಿದ್ದಾರೆ. ತಮ್ಮ ದೇಹವನ್ನು ನಿಮ್ಹಾನ್ಸ್ ಆಸ್ಪತ್ರೆಗೆ ದಾನವನ್ನು ಮಾಡುವಂತೆ ಸೂಚಿಸಿದ್ದಂತೆ, ನಾಳೆ ಅಂತಿಮ ದರ್ಶನದ ಬಳಿಕ ಮಾಡಲಾಗುತ್ತಿದೆ. ಇಂದು ಸಂಜೆ 5.30ರ ಸುಮಾರಿಗೆ ಹೃದಯಾಘಾತಕ್ಕೆ ಸಾರಿಗೆ ನೌಕರರ ಸಂಘಟನೆಯ ಮುಖಂಡ ಹೆಚ್.ವಿ ಅನಂತ್ ಸುಬ್ಬರಾವ್ ಒಳಗಾಗಿದ್ದರು. ಅವರನ್ನು ವಿಜಯನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದರು. ಅನಂತ್ ಸುಬ್ಬರಾವ್ ನಿಧನದ ಹಿನ್ನಲೆಯಲ್ಲಿ ನಾಳೆ ನಿಗದಿಯಾಗಿದ್ದಂತ ಸಾರಿಗೆ ನೌಕರರ ಬೆಂಗಳೂರು ಚಲೋ ಹೋರಾಟವನ್ನು ಮುಂದೂಡಲಾಗಿದೆ. … Continue reading ಸಾವಿನಲ್ಲೂ ಸಾರ್ಥಕತೆ ಮೆರೆದ ಅನಂತ್ ಸುಬ್ಬರಾವ್: ನಾಳೆ ನಿಮ್ಹಾನ್ಸ್ ಆಸ್ಪತ್ರೆಗೆ ದೇಹದಾನ