ಸುಭಾಷಿತ :

Wednesday, January 22 , 2020 12:12 PM

ಕಾಯಕಯೋಗಿ ಸಿದ್ದಗಂಗಾ ಶ್ರೀಗಳ ಗದ್ದುಗೆ ಮೇಲೆ ಪ್ರತಿಷ್ಠಾಪನೆಯಾಯಿತು ’ಶಿವಲಿಂಗ’


Monday, November 11th, 2019 9:35 am

ತುಮಕೂರು: ಸಿದ್ದಗಂಗೆಯ ಶಿವೈಕ್ಯ ಶತಾಯುಷಿ ಶಿವಕುಮಾರ ಶ್ರೀಗಳ ಐಕ್ಯ ಸ್ಥಳದ ಮೇಲೆ ಇಂದು ಶಿವಲಿಂಗ ಪ್ರತಿಷ್ಠಾಪನೆಯಾಗಿದೆ. ಇಂದು ಬೆಳಗ್ಗಿನ ಜಾವ ಬ್ರಾಹ್ಮಿ ಮುಹೂರ್ತದಲ್ಲಿ ಶಿವಕುಮಾರ ಶ್ರೀಗಳ ಗದ್ದುಗೆಯ ಪೀಠದ ಮೇಲೆ ಶಿವಲಿಂಗ ಪ್ರತಿಷ್ಠಾಪನೆ ಮಾಡಲಾಯಿತು.

ಲಿಂಗವನ್ನು ಶ್ರೀಗಳು ತಂಗುತ್ತಿದ್ದ ಹಳೆ ಮಠದಲ್ಲಿ ಮಂಡಳದ 48 ದಿನಗಳ ಕಾಲ ಜಲಾಧಿವಾಸ, ಧಾನ್ಯಾಧಿವಾಸ, ಪುಷ್ಪಾಧಿವಾಸ ಹಾಗೂ ಶಯನಾಧಿವಾಸದ ವಿಧಿವಿಧಾನ ಪೂರೈಸಲಾಗಿತ್ತು. ಹೀಗೆ ಸಕಲ ವಿಧಾನ ಪೂರೈಸಿ ದೈವೀ ಶಕ್ತಿಯನ್ನು ಪಡೆದ ಪವಿತ್ರ ಲಿಂಗವನ್ನು ಶ್ರೀಗಳ ಗದ್ದುಗೆಯ ಪೀಠದ ಮೇಲೆ ಇರಿಸಲಾಗಿದೆ.

ಪ್ರತಿಷ್ಠಾಪಿಸಲ್ಪಟ್ಟ ಶಿವಲಿಂಗವು 27 ಇಂಚು ಉದ್ದವಿದೆ. ಶಿವಕುಮಾರ ಶ್ರೀಗಳ ಕೈಯಲ್ಲಿನ ಗೇಣು 9 ಇಂಚು ಇತ್ತು. ಆ ಗೇಣಿನ ಮೂರು ಪಟ್ಟು ಲಿಂಗವನ್ನು ರೂಪಿಸಲಾಗಿದೆ. ಪಾನ ಬಟ್ಟಲು ಸೇರಿ ಪೂರ್ಣವಾಗಿ ಲಿಂಗ 38 ಇಂಚು ಇದೆ. ಲಿಂಗ ಪ್ರತಿಷ್ಠಾಪನಾ ಕಾರ್ಯಕ್ರಮ ಕಣ್ಣು ತುಂಬಿಕೊಳ್ಳಲು ನಾಡಿನ ವಿವಿಧೆಡೆಗಳಿಂದ ಭಕ್ತಾದಿಗಳು ಸಮೂಹ ಹಾಜರಿದ್ದು, ಶಿವಲಿಂಗ ದರ್ಶನ ಪಡೆದರು.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions