ನವದೆಹಲಿ : ಇಂದು ಆಂಧ್ರಪ್ರದೇಶ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ರಾಜ್ಯದ ಹಲವು ಸಮಸ್ಯೆಗಳ ಕುರಿತು ಚರ್ಚಿಸಿದರು. ಪೋಲಾವರಂ ನೀರಾವರಿ ಯೋಜನೆಗೆ ಬಾಕಿ ಇರುವ ಹಣವನ್ನು ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದಾರೆ.
ಆಂಧ್ರ ಸಿಎಂ, ತಮ್ಮ ರಾಜ್ಯದಲ್ಲಿ ಈಗಾಗಲೇ ಪೋಲವರಂ ಯೋಜನೆಗೆ ಸುಮಾರು 2,900 ಕೋಟಿ ರೂ.ಗಳನ್ನು ಖರ್ಚು ಮಾಡಿದ್ದು, ಇದುವರೆಗೂ ಕೇಂದ್ರ ಸರ್ಕಾರವು ಮರುಪಾವತಿ ಮಾಡಿಲ್ಲ ಎನ್ನಲಾಗುತ್ತಿದೆ.
ಸರ್ಕಾರವು ಸಂಪನ್ಮೂಲ ಕೊರತೆಯನ್ನು ಎದುರಿಸುತ್ತಿದೆ. ಯೋಜನೆಯನ್ನು ತ್ವರಿತವಾಗಿ ಪೂರ್ಣಗೊಳಿಸಲು ತಾತ್ಕಾಲಿಕ ಆಧಾರದ ಮೇಲೆ 10,000 ಕೋಟಿ ರೂ.ಗಳನ್ನು ಒದಗಿಸುವಂತೆ ಕೇಂದ್ರಕ್ಕೆ ಮನವಿ ಮಾಡಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ರೆಡ್ಡಿ ಅವರು ಪೋಲಾವರಂ ಯೋಜನೆಗೆ 55,548.87 ಕೋಟಿ ರೂಪಾಯಿಗಳ ಪರಿಷ್ಕೃತ ವೆಚ್ಚದ ಅಂದಾಜಿನ ಪೂರ್ವಭಾವಿ ಅನುಮೋದನೆಯನ್ನು ಕೋರಿದರು.
ಆಂಧ್ರ ಪ್ರದೇಶ ಮರುಸಂಘಟನೆ ಕಾಯ್ದೆಗೆ ಸಂಬಂಧಿಸಿದ ವಿಷಯಗಳ ಬಗ್ಗೆಯೂ ಚರ್ಚಿಸಿದ ಸಿಎಂ ಜಗನ್, ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ದಕ್ಷಿಣ ರಾಜ್ಯದಲ್ಲಿ ಹೆಚ್ಚಿನ ಫಲಾನುಭವಿಗಳನ್ನು ಸೇರಿಸಲು, ಇನ್ನೂ 12 ವೈದ್ಯಕೀಯ ಕಾಲೇಜುಗಳಿಗೆ ಅನುಮೋದನೆ ಮತ್ತು ಗಣಿ ಅದಿರು ಮತ್ತು ಕಡಲತೀರದ ಖನಿಜ ಪ್ರದೇಶಗಳ ಹಂಚಿಕೆಗೆ ಒತ್ತಾಯಿಸಿದರು.
ಪ್ರಪಂಚದಾದ್ಯಂತ ಕೋವಿಡ್ ಸಾಂಕ್ರಾಮಿಕ ರೋಗದ ಇತ್ತೀಚಿನ ಬೆಳವಣಿಗೆಗಳ ಹಿನ್ನೆಲೆಯಲ್ಲಿ ರಾಜ್ಯವು ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಸನ್ನದ್ಧವಾಗಿದೆ ಎಂದು ಮುಖ್ಯಮಂತ್ರಿಗಳು ಪ್ರಧಾನ ಮಂತ್ರಿಗಳಿಗೆ ತಿಳಿಸಿದರು.
ಇದೇ ವೇಳೆ ಆಂಧ್ರ ಸಿಎಂ , ಕೇಂದ್ರ ಪರಿಸರ ಸಚಿವ ಭೂಪೇಂದರ್ ಯಾದವ್ ಅವರನ್ನು ಭೇಟಿ ಮಾಡಿದರು. ಇದಾದ ಬಳಿಕ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಲಿದ್ದಾರೆ ಎನ್ನಲಾಗುತ್ತಿದೆ.
‘R.V ದೇಶಪಾಂಡೆ’ ಜನ್ಮ ದಿನಾಂಕದ ಬಗ್ಗೆ ಅನುಮಾನ, ತನಿಖೆ ನಡೆಸಲು ಸಮಿತಿ ರಚಿಸಿ’ : ಸದನದಲ್ಲಿ ಸಿದ್ದು ಹಾಸ್ಯ ಚಟಾಕಿ