ಬೆಂಗಳೂರು: ಆಂಧ್ರಪ್ರದೇಶದ ಉಪ ಮುಖ್ಯಮಂತ್ರಿ ಹಾಗೂ ನಟ ಪವನ್ ಕಲ್ಯಾಣ್ ಅವರು ಇಂದು ವಿಧಾನಸೌಧಕ್ಕೆ ಆಗಮಿಸಿದ್ದರು. ಅಲ್ಲಿ ನಡೆದಂತ ಸಭೆಯಲ್ಲಿ ಭಾಗಿಯಾಗಿ ವಾಪಾಸ್ ತೆರಳುತ್ತಿದ್ದಂತ ವೇಳೆಯಲ್ಲಿ ನೂಕು ನುಗ್ಗಲು ಉಂಟಾದ ಪರಿಣಾಮ ಸಿಎಸ್ ಕಚೇರಿ ಗ್ಲಾಸ್ ಪುಡಿ ಪುಡಿಯಾಗಿರುವುದಾಗಿ ತಿಳಿದು ಬಂದಿದೆ.
ಬೆಂಗಳೂರಿನ ವಿಧಾನಸೌಧದಲ್ಲಿನ ಸಭೆಯೊಂದರಲ್ಲಿ ಭಾಗಿಯಾಗುವುದಕ್ಕೆ ಆಂಧ್ರ ಪ್ರದೇಶದ ಡಿಸಿಎಂ ಪವನ್ ಕಲ್ಯಾಣ್ ಆಗಮಿಸಿದ್ದರು. ಇಂದಿನ ಸಭೆಯಲ್ಲಿ ಭಾಗಿಯಾದ ಬಳಿಕ, ವಿಧಾನಸೌಧದಲ್ಲಿ ತೆರಳುತ್ತಿದ್ದಂತ ವೇಳೆಯಲ್ಲಿ ಭಾರೀ ನೂಕು ನುಗ್ಗಲೇ ಉಂಟಾಗಿದೆ.
ಪವನ್ ಕಲ್ಯಾಣ್ ವಿಧಾನಸೌಧದಿಂದ ಹೊರಗೆ ತೆರಳುತ್ತಿದ್ದಂತ ವೇಳೆಯಲ್ಲಿ ನೂಗು ನುಗ್ಗಲು ಉಂಟಾಗಿದೆ. ಈ ವೇಳೆಯಲ್ಲಿ ಸಿಎಸ್ ಕಚೇರಿಯ ಕಿಟಕಿಯ ಗ್ಲಾಸ್ ಪುಡಿ ಪುಡಿಯಾಗಿರುವುದಾಗಿ ತಿಳಿದು ಬಂದಿದೆ.
ಅರಣ್ಯ ಸಂರಕ್ಷಣೆ- ಈಶ್ವರ ಖಂಡ್ರೆ ಕಾರ್ಯಕ್ಕೆ ಪವನ್ ಕಲ್ಯಾಣ್ ಮೆಚ್ಚುಗೆ
ಬೆಂಗಳೂರು : ಪರಿಸರ, ಪ್ರಕೃತಿ ಮತ್ತು ಅರಣ್ಯ ಸಂರಕ್ಷಣೆಗೆ ಕರ್ನಾಟಕದ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರಿಗಿರುವ ಒಲವು ಪ್ರೀತಿ ಮತ್ತು ಬದ್ಧತೆಗೆ ಆಂಧ್ರಪ್ರದೇಶದ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಅರಣ್ಯ ಸಚಿವರು ಹಾಗೂ ಅರಣ್ಯಾಧಿಕಾರಗಳೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಈಶ್ವರ ಖಂಡ್ರೆ ಅವರ ಮನದ ಭಾವನೆಗಳಿಗೆ ಅಭಿನಂದನೆ ಸಲ್ಲಿಸುವುದಾಗಿ ಹೇಳಿದರು.
ತೆಲುಗು ಮತ್ತು ಕನ್ನಡ ಭಾಷೆಯ ಲಿಪಿಯಲ್ಲಿ ಸಾಮ್ಯತೆ ಇದೆ ಎಂದ ಅವರು ರಾಷ್ಟ್ರಕವಿ ಕುವೆಂಪು ಅವರ “ಅರಣ್ಯಕ್ಕೆ ಹಾಡು ಹಾಡುವ ಮುನ್ನ ನಾನು ನನ್ನ ಮನದ ಮುಂದೆ ನಿಲ್ಲುತ್ತೇನೆ” ಎಂಬ ಸಾಲುಗಳನ್ನು ಉಲ್ಲೇಖಿಸಿ ತಮಗೆ ಈ ಸಭೆಯಿಂದ ಕನ್ನಡ ಕಲಿಯುವ ಪ್ರೇರಣೆ ಲಭಿಸಿದೆ ಎಂದರು.
ಚಿತ್ರನಟರು ಆದ ಅವರು ಕನ್ನಡದ ಮೇರು ನಟ ಡಾ. ರಾಜಕುಮಾರ್ ಅವರ ಗಂಧದಗುಡಿ ಚಿತ್ರದ ಉಲ್ಲೇಖ ಮಾಡಿ ಅರಣ್ಯ ಸಂರಕ್ಷಣೆ ಸಂದೇಶ ಸಾರಿದ ಚಿತ್ರ ಎಂದರು.
ಶ್ರೀಶೈಲ ಮತ್ತು ತಿರುಪತಿಯಲ್ಲಿ ಕರ್ನಾಟಕದ ಭಕ್ತಾದಿಗಳಿಗೆ ಅನುಕೂಲತೆ ಕಲ್ಪಿಸಲು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಸಂಪುಟದಲ್ಲಿ ತೀರ್ಮಾನ ಕೈಗೊಳ್ಳುವುದಾಗಿ ಹೇಳಿದರು.
BREAKING :`PG’ ವೈದ್ಯರ ಕಡ್ಡಾಯ ಸೇವಾ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ತಡೆ | Karnataka High Court
7ನೇ ವೇತನ ಆಯೋಗ : ಸರ್ಕಾರಿ ನೌಕರರಿಗೆ ಮತ್ತೊಂದು ಗುಡ್ ನ್ಯೂಸ್ | 7th Pay Commission