ಬೆಂಗಳೂರು: ಇಂದು ಬೆಂಗಳೂರಿನ ಕೆ ಎಸ್ ಆರ್ ಟಿಸಿ ಕೇಂದ್ರ ಕಚೇರಿಗೆ ಆಂಧ್ರ ಪ್ರದೇಶ ಸರ್ಕಾರದ ಸಚಿವರ ದಂಡೇ ಭೇಟಿ ನೀಡಿದೆ. ಕಚೇರಿಯಲ್ಲಿ ಸಭೆ ನಡೆಸಿ, ಕರ್ನಾಟಕದಲ್ಲಿ ಜಾರಿಯಲ್ಲಿರುವಂತ ಶಕ್ತಿ ಯೋಜನೆಯ ಬಗ್ಗೆ ಚರ್ಚಿಸಿ, ಮಾಹಿತಿಯನ್ನು ಪಡೆದಿದೆ.
ಇಂದು ಆಂಧ್ರಪ್ರದೇಶ ಸರ್ಕಾರದ ಮಂಡಿಪಲ್ಲಿ ರಾಮಪ್ರಸಾದ್ ರೆಡ್ಡಿ, ಸಾರಿಗೆ, ಯುವಜನ & ಕ್ರೀಡಾ ಸಚಿವರು, ಅನಿತಾ ವಂಗಲಪುಡಿ, ಗೃಹ ಹಾಗೂ ವಿಪತ್ತು ನಿರ್ವಹಣೆ ಸಚಿವರು, ಗುಮ್ಮಿಡಿ ಸಂಧ್ಯಾರಾಣಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರು, ಪ್ರಧಾನ ಕಾರ್ಯದರ್ಶಿಗಳು, ಸಾರಿಗೆ, ರಸ್ತೆ ಮತ್ತು ಕಟ್ಟಡ, ಕಾರ್ಯದರ್ಶಿಗಳು, ಆರ್ಥಿಕ ಇಲಾಖೆ ಹಾಗೂ ಆಂಧ್ರ ಪ್ರದೇಶ ರಸ್ತೆ ಸಾರಿಗೆ ಸಂಸ್ಥೆಯ ಅಧಿಕಾರಿಗಳ ತಂಡವು ಕರಾರಸಾ ನಿಗಮದ, ಕೇಂದ್ರ ಕಛೇರಿಗೆ ಭೇಟಿ ನೀಡಿದರು.
ಕೆ ಎಸ್ ಆರ್ ಟಿಸಿ ನಿಗಮದಲ್ಲಿ ಶಕ್ತಿ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲು ಕೈಗೊಂಡಿರುವ ಕ್ರಮಗಳ ಕುರಿತು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಮತ್ತು ಕೆ ಎಸ್ ಆರ್ ಟಿಸಿ ಉಪಾಧ್ಯಕ್ಷರು, ಸರ್ಕಾರದ ಕಾರ್ಯದರ್ಶಿಗಳು, ಸಾರಿಗೆ ಇಲಾಖೆ, ವ್ಯವಸ್ಥಾಪಕ ನಿರ್ದೇಶಕರು, ಕರಾರಸಾ ನಿಗಮ ಅವರಿಂದ “ಶಕ್ತಿ ಯೋಜನೆ” ಯ ಕುರಿತು ವಿವರವಾಗಿ ಚರ್ಚಿಸಿ ಮಾಹಿತಿ ಪಡೆದುಕೊಂಡರು.
ಮುಂದುವರೆದು, ನಿಗಮದ ಬೆಂಗಳೂರು ಕೇಂದ್ರೀಯ ವಿಭಾಗದ ಘಟಕ-2ಕ್ಕೆ ಭೇಟಿ ನೀಡಿದ ತಂಡವು ಐರಾವತ ಕ್ಲಬ್ ಕಾಸ್ 2.0, ಐರಾವತ ಕ್ಲಬ್ ಕಾಸ್, ಅಂಬಾರಿ ಡ್ರೀಮ್ ಕ್ಲಾಸ್, ಪಲ್ಲಕ್ಕಿ, ಅಂಬಾರಿ ಉತ್ಸವ, ಫ್ಲೈ ಬಸ್, ನಗರ ಸಾರಿಗೆ, ರಾಜಹಂಸ ಹಾಗೂ ಅಶ್ವಮೇಧ ವಾಹನಗಳನ್ನು ವೀಕ್ಷಿಸಿದರು. ಘಟಕಗಳ ನಿರ್ವಹಣೆ, ವಾಹನಗಳಿಗೆ ನೀಡಿರುವ ಬ್ರಾಂಡಿಗ್ ಹಾಗೂ ವಾಹನಗಳ ಪುನಶ್ಚೇತನ ಕಾರ್ಯದ ಕುರಿತು ಮುಕ್ತಕಂಠದಿಂದ ಮೆಚ್ಚುಗೆ ವ್ಯಕ್ತಪಡಿಸಿದರು.
ನಂತರ ಶಾಂತಿನಗರ ಬಸ್ ನಿಲ್ದಾಣಕ್ಕೆ ಭೇಟಿ ನೀಡಿ, ಸರ್ಕಾರದ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆ ಯ ಉಚಿತ ಪ್ರಯಾಣದ ಕುರಿತು ಮಹಿಳಾ ಪ್ರಯಾಣಿಕರಿಂದ ಅನುಭವ ಪಡೆದುಕೊಂಡರು.
ಈ ಸಂದರ್ಭದಲ್ಲಿ ವ್ಯವಸ್ಥಾಪಕ ನಿರ್ದೇಶಕರು ಬೆಂ.ಮ.ಸಾ. ಸಂಸ್ಥೆ, ಹಾಗೂ ಮಾನ್ಯ ನಿರ್ದೇಶಕರು (ಸಿ ಮತ್ತು ಜಾ) ಹಾಗೂ ಎ.ಪಿ.ಎಸ್.ಆರ್.ಟಿ.ಸಿ. ಹಾಗೂ ಕರಾರಸಾ ನಿಗಮದ ಅಧಿಕಾರಿಗಳು ಉಪಸ್ಥಿತಿರಿದ್ದರು.
ಪತ್ರಿಕಾ ಕಚೇರಿಗಳಲ್ಲಿ ‘ಇಂಟರ್ನ್‌ಷಿಪ್’ ಯೋಜನೆ: ‘ಮಹಿಳಾ ಅಭ್ಯರ್ಥಿ’ಗಳಿಂದ ಅರ್ಜಿ ಆಹ್ವಾನ
ರಾಜ್ಯದ ವಿವಿಗಳಲ್ಲಿ ಸೂಕ್ತ ನೇಮಕಾತಿ ಮಾಡಿಕೊಳ್ಳದೆ ಉನ್ನತ ಶಿಕ್ಷಣ ಸಂಪೂರ್ಣ ನಿರ್ಲಕ್ಷ್ಯ: ಮುಖ್ಯಮಂತ್ರಿ ಚಂದ್ರು