ನವದೆಹಲಿ : ಆಂಧ್ರಪ್ರದೇಶದ ಅನಕಪಲ್ಲಿಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 18ಕ್ಕೆ ಏರಿಕೆಯಾಗಿದ್ದು, ಮೃತರ ಕುಟುಂಬಳಿಗೆ ತಲಾ 2 ಲಕ್ಷ ಪರಿಹಾರ ನೀಡುವುದಾಗಿ ಪ್ರಧಾನಿ ಮೋದಿ ಘೋಷಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಆಂಧ್ರ ಪ್ರದೇಶದ ಅನಕಪಲ್ಲಿಯ ಕಾರ್ಖಾನೆಯಲ್ಲಿ ಸಂಭವಿಸಿದ ಅಪಘಾತದಿಂದಾಗಿ ಜೀವಹಾನಿಯಾಗಿರುವುದು ನೋವುಂಟು ಮಾಡಿದೆ. ತಮ್ಮ ಹತ್ತಿರದ ಮತ್ತು ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪಗಳು. ಗಾಯಾಳುಗಳು ಶೀಘ್ರ ಗುಣಮುಖರಾಗಲಿ. ಮೃತರ ಕುಟುಂಬಗಳಿಗೆ ಪಿಎಂಎನ್ಆರ್ಎಫ್ನಿಂದ ತಲಾ 2 ಲಕ್ಷ ರೂ. ಗಾಯಗೊಂಡವರಿಗೆ 50,000 ರೂ.ನೀಡುವುದಾಗಿ ಘೋಷಿಸಿದ್ದಾರೆ.
Pained by the loss of lives due to a mishap at a factory in Anakapalle. Condolences to those who lost their near and dear ones. May the injured recover soon. An ex-gratia of Rs. 2 lakhs from PMNRF would be given to the next of kin of each deceased. The injured would be given Rs.…
— PMO India (@PMOIndia) August 21, 2024
ಆಂಧ್ರಪ್ರದೇಶದ ಅನಕಪಲ್ಲಿಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 18ಕ್ಕೆ ಏರಿಕೆಯಾಗಿದೆ, ಇನ್ನು 41 ಜನರು ಗಾಯಗೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಅಚ್ಯುತಪುರಂ ವಿಶೇಷ ಆರ್ಥಿಕ ವಲಯದಲ್ಲಿ ಈ ಸ್ಫೋಟ ಸಂಭವಿಸಿದೆ.
ವಿಶೇಷ ಆರ್ಥಿಕ ವಲಯದಲ್ಲಿರುವ ಫಾರ್ಮಾ ಸಂಸ್ಥೆಯ ಘಟಕವಾದ ಎಸ್ಸಿಯೆಂಟಿಯಾ ಕಂಪನಿಯಲ್ಲಿ ಸ್ಫೋಟ ಸಂಭವಿಸಿದೆ. ಗಾಯಾಳುಗಳನ್ನ ಎನ್ಟಿಆರ್ ಆಸ್ಪತ್ರೆಗೆ ದಾಖಲಿಸಲಾಗಿದೆ.