ಆಂಧ್ರಪ್ರದೇಶ : ನಿನ್ನೆ ರಾತ್ರಿ ಆಂಧ್ರಪ್ರದೇಶದ ನೆಲ್ಲೂರು ಜಿಲ್ಲೆಯ ಕಂದುಕೂರುನಲ್ಲಿ ಆಂಧ್ರ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಅವರ ಬೃಹತ್ ರೋಡ್ ಶೋ ನಡೆಸಿದ್ದರು. ಈ ವೇಳೆ ಕಾಲ್ತುಳಿತಕ್ಕೆ ಎಂಟು ಮಂದಿ ಬಲಿಯಾಗಿದ್ದು, ಅವರ ಕುಟುಂಬಗಳಿಗೆ ತಲಾ 24 ಲಕ್ಷ ರೂ.ಆರ್ಥಿಕ ನೆರವು ನೀಡುವುದಾಗಿ ತೆಲುಗು ದೇಶಂ ಪಕ್ಷ (ಟಿಡಿಪಿ) ಘೋಷಿಸಿದೆ.
ಪಕ್ಷವು ಮೃತರ ಕುಟುಂಬಗಳಿಗೆ ತಲಾ 15 ಲಕ್ಷ ರೂ.ಗಳನ್ನು ನೀಡುತ್ತಿದೆ ಎಂದು ಟಿಡಿಪಿ ಗುರುವಾರ ಪ್ರಕಟಿಸಿದ್ದು, ರಾಜ್ಯದ ಇತರ ಭಾಗಗಳ ಸ್ಥಳೀಯ ಮುಖಂಡರು ತಲಾ 2 ಲಕ್ಷ, 1 ಲಕ್ಷ ಮತ್ತು 50,000 ರೂ.ಗಳನ್ನು ನೀಡುತ್ತಿದ್ದಾರೆ.
ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಬುಧವಾರದ ಘಟನೆಯಲ್ಲಿ ಸಾವನ್ನಪ್ಪಿದವರ ಕುಟುಂಬಗಳಿಗೆ ಪಕ್ಷವು ನೆರವು ನೀಡಲಿದೆ ಎಂದು ಈಗಾಗಲೇ ಘೋಷಿಸಿದ್ದಾರೆ. ಘಟನೆಯಲ್ಲಿ ಮೃತಪಟ್ಟವರ ಮಕ್ಕಳನ್ನು ಎನ್ ಟಿಆರ್ ಟ್ರಸ್ಟ್ ಶಿಕ್ಷಣ ಸಂಸ್ಥೆಗಳಲ್ಲಿ ಶಿಕ್ಷಣ ನೀಡಲಾಗುವುದು ಎಂದು ನಾಯ್ಡು ಹೇಳಿದ್ದಾರೆ.
ಇಂದು ನಾಯ್ಡು, ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದರು. ಕುಟುಂಬ ಸದಸ್ಯರಿಗೆ ಪಕ್ಷ ಬೆಂಬಲವಾಗಿ ನಿಲ್ಲುತ್ತದೆ ಎಂದು ಭರವಸೆ ನೀಡಿದರು. ಪಕ್ಷದ ಪರವಾಗಿ ಎಕ್ಸ್ ಗ್ರೇಷಿಯಾ ಚೆಕ್ ವಿತರಿಸಿದರು.
ಪ್ರಧಾನಿ ಸಂತಾಪ
ಇಂದು ಪ್ರಧಾನಿ ಮೋದಿಯವರು ಕಾಲ್ತುಳಿತದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ್ದು, ಅವರ ಸಂಬಂಧಿಕರಿಗೆ 2 ಲಕ್ಷ ರೂ. ಪರಿಹಾರ ಗಾಯಗೊಂಡವರಿಗೆ ತಲಾ 50,000 ರೂ. ಪರಿಹಾರ ಘೋಷಿಸಿದ್ದಾರೆ.
ಆಂಧ್ರಪ್ರದೇಶದ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರು ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಮತ್ತು ಗಾಯಗೊಂಡವರಿಗೆ ತಲಾ 50,000 ರೂ.ಗಳ ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ.
ಬುಧವಾರ ಸಂಜೆ(ನಿನ್ನೆ) ಕಂದುಕೂರಿನಲ್ಲಿ ಟಿಡಿಪಿ ಕಾರ್ಯಕ್ರಮದ ವೇಳೆ ಉಂಟಾದ ಕಾಲ್ತುಳಿತದಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಎಂಟು ಜನರು ಸಾವನ್ನಪ್ಪಿದ್ದರು. ಎಂಟು ಜನರು ಗಾಯಗೊಂಡಿದ್ದರು.
BREAKING NEWS : ವಿಧಾನಸಭೆಯಲ್ಲಿ ಖಾಸಗಿ ವಿಶ್ವವಿದ್ಯಾಲಯಗಳ ವಿಧೇಯಕ ಮಂಡನೆ