ಬೆಂಗಳೂರು: ನಗರದಲ್ಲಿ ಆಂಧ್ರದ ರೌಡಿಶೀಟರ್ ಶಿವಶಂಕರ್ ರೆಡ್ಡಿ ಸೇರಿದಂತೆ ಇಬ್ಬರ ಮೇಲೆ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ನಾಲ್ಕನೇ ಆರೋಪಿ ಕೋರ್ಟ್ ಗೆ ಶರಣಾಗಿದ್ದಾನೆ.
ಆಂಧ್ರಪ್ರದೇಶದ ಮದನಪಲ್ಲಿ ಪೊಲೀಸ್ ಠಾಣೆಯ ರೌಡಿಶೀಟರ್ ಆಗಿರುವ ಶಿವಶಂಕರ್ ರೆಡ್ಡಿ ಮತ್ತು ಡ್ರೈವರ್ ಅಶೋಕ್ ರೆಡ್ಡಿ ಮೇಲೆ ಡಿಸೆಂಬರ್ 8ರಂದು ಗುಂಡಿನ ದಾಳಿ ನಡೆದಿತ್ತು. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಪ್ರಕರಣ ದಾಖಲಿಸಿಕೊಂಡಿದ್ದ ಕೆ.ಆರ್.ಪುರಂ ಠಾಣಾ ಪೊಲೀಸರು, ಆರೋಪಿಗಳ ಬಂಧನಕ್ಕೆ ಮೂರು ತಂಡಗಳನ್ನು ರಚನೆ ಮಾಡಿದ್ದರು. ನಂತರ ಮೂವರು ಆರೋಪಿಗಳನ್ನು ಸೆರೆ ಹಿಡಿದ್ದರು.
ಇದೀಗ ಆಂದ್ರದ ರೌಡಿ ಹತ್ಯೆಗೆ ಸುಪಾರಿ ಕೊಟ್ಟಿದ್ದ ಆರೋಪಿ ಭವಾನಿ ಶಂಕರ್ ಕೋರ್ಟ್ ಗೆ ಶರಣಾಗಿದ್ದು, ಸದ್ಯ ಕೆ ಆರ್ ಪುರಂ ಠಾಣೆ ಪೊಲೀಸರು ಈತನನ್ನು ವಶಕ್ಕೆ ಪಡೆದಿದ್ದಾರೆ. ಹಳೆ ದ್ವೇಷದ ಹಿನ್ನಲೆ ಶಿವಶಂಕರ್ ರೆಡ್ಡಿ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ ಎನ್ನಲಾಗಿದೆ.
BIG NEWS: ನಿಯಮಾನುಸಾರ ನೌಕರರು ‘Moonlight’ ಕೆಲಸ ಮಾಡುವಂತಿಲ್ಲ: ಕೇಂದ್ರ ಸರ್ಕಾರ
BIGG NEWS : ಮೂಡಿಗೆರೆಯಲ್ಲಿ ಲಕ್ಷ ಲಕ್ಷ ಖರ್ಚು ಮಾಡಿ ಹಿಡಿದ ಆನೆ ‘ಭೈರ’ ಅಲ್ಲ..?