ಬೆಂಗಳೂರು: ಏಪ್ರಿಲ್ ಹಾಗೂ ಮೇ ತಿಂಗಳಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗಿರುವ ಬೆಳಗಾವಿ ವಿಭಾಗದ ವಿಜಯಪುರ ಹಾಗೂ ಬಾಗಲಕೋಟೆ, ಬೆಂಗಳೂರು ವಿಭಾಗದ ಚಿತ್ರದುರ್ಗ ಜಿಲ್ಲೆ ಹಾಗೂ ಕಲಬುರಗಿ ವಿಭಾಗದ ಎಲ್ಲಾ ಜಿಲ್ಲೆಗಳಲ್ಲಿ ಅಂಗನವಾಡಿ ಕೇಂದ್ರಗಳ ಅವಧಿಯನ್ನು ಬೆಳಗ್ಗೆ 8 ರಿಂದ ಮಧ್ಯಾಹ್ನ 1.30 ರವರೆಗೆ ನಿಗದಿಪಡಿಸಲಾಗಿದೆ.
ಈ ಸಂಬಂಧ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಂಟಿ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದು, ಬೆಳಗಾವಿ ವಿಭಾಗದ ವಿಜಯಪುರ ಮತ್ತು ಬಾಗಲಕೋಟೆ, ಬೆಂಗಳೂರು ವಿಭಾಗದ – ಚಿತ್ರದುರ್ಗ ಜಿಲ್ಲೆ ಹಾಗೂ ಕಲ್ಬುರ್ಗಿ ವಿಭಾಗದ ಎಲ್ಲಾ ಜಿಲ್ಲೆಗಳಲ್ಲಿ ಏಪ್ರಿಲ್ ಮತ್ತು ಮೇ ಮಾಹೆಯಲ್ಲಿ ಬಿಸಿಲಿನ ತಾಪಮಾನ ತೀವ್ರವಾಗಿರುತ್ತದೆ ಎಂದಿದ್ದಾರೆ.
ಈ ಹಿನ್ನೆಲೆಯಲ್ಲಿ ಅಂಗನವಾಡಿ ಕೇಂದ್ರಗಳ ಕಾರ್ಯನಿರ್ವಹಣಾ ಅವಧಿಯನ್ನು ಬೆಳಗ್ಗೆ 8.00 ಗಂಟೆಯಿಂದ ಮಧ್ಯಾಹ್ನ 01.30 ಗಂಟೆವರೆಗೆ ಸಮಯವನ್ನು ನಿಗಧಿಪಡಿಸಿ ಪ್ರತಿ ವರ್ಷ ಏಪ್ರಿಲ್ ಮತ್ತು ಮೇ ಮಾಹಗಳಿಗೆ ಅನ್ವಯಿಸುವಂತೆ ಉಲ್ಲೇಖಿತ ಪತ್ರದಲ್ಲಿ ಈಗಾಗಲೇ ಆದೇಶಿಸಲಾಗಿದೆ ಎಂದು ಹೇಳಿದ್ದಾರೆ.
ಅದರಂತೆ ಇನ್ನು ಮುಂದೆ ಪುತಿ ವರ್ಷ ಕ್ರಮ ವಹಿಸಲು ಸೂಚಿಸಿದೆ. ಅಂಗನವಾಡಿ ಕೇಂದ್ರದಲ್ಲಿ ಐ.ಸಿ.ಡಿ.ಎಸ್. ನ ಇತರೆ ಸೇವೆಗಳಿಗೆ ಯಾವುದೇ ರೀತಿಯಲ್ಲಿ ಧಕ್ಕೆಯಾಗದಂತೆ ಕಾರ್ಯನಿರ್ವಹಿಸತಕ್ಕದ್ದು ಅಂತ ಸೂಚಿಸಿದ್ದಾರೆ.
GOOD NEWS: ಶೀಘ್ರವೇ ‘ರಾಜ್ಯ ಸರ್ಕಾರಿ ನೌಕರ’ರಿಗೆ ಮತ್ತೊಂದು ಸಿಹಿಸುದ್ದಿ ನೀಡಲು ಮುಂದಾದ ಸರ್ಕಾರ
ಸಾವರ್ಕರ್ ಬಗ್ಗೆ ಅವಹೇಳನಕಾರಿ ಹೇಳಿಕೆ: ರಾಹುಲ್ ಗಾಂಧಿಗೆ ನೀಡಿದ್ದ ಸಮನ್ಸ್ ರದ್ದತಿಗೆ ಕೋರ್ಟ್ ನಕಾರ