ಉತ್ತರ ಕನ್ನಡ: ಜಿಲ್ಲೆಯಲ್ಲಿ ಅಕ್ರಮವಾಗಿ ಅಂಗನವಾಡಿ ರೇಷನ್ ಅನ್ನು ದನದ ಕೊಟ್ಟಿಗೆಯಲ್ಲಿ ಸಂಗ್ರಹಿಸಿಟ್ಟಿದ್ದನ್ನು ತಹಶೀಲ್ದಾರ್ ನೇತೃತ್ವದ ತಂಡವು ಪತ್ತೆಹಚ್ಚಿದೆ. ಆ ನಂತ್ರ ಮಕ್ಕಳಿಗೆ ಕೊಡುವ ರೇಷನ್ ಅಕ್ರಮವಾಗಿ ಸಂಗ್ರಹಿಸಿದ್ದನ್ನು ಕಂಡು ಶಾಕ್ ಆಗಿದೆ.
ಉತ್ತರ ಕನ್ನಡ ಜಿಲ್ಲೆಯ ಕೆ.ಜಿ ಹಳ್ಳಿಯಲ್ಲಿ ಅಕ್ರಮವಾಗಿ ಅಂಗನವಾಡಿ ರೇಷನ್ ಸಂಗ್ರಹಿಸಿರುವಂತ ವಿಷಯ ತಹಶೀಲ್ದಾರ್ ಪ್ರವೀಣ್ ಹುಚ್ಚಣ್ಣನವರಿಗೆ ಸಿಕ್ಕಿತ್ತು. ಈ ಹಿನ್ನಲೆಯಲ್ಲಿ ಪೊಲೀಸರೊಂದಿಗೆ ಸಹದೇವ ರುದ್ರಪ್ಪ ಎನ್ನುವವರ ದನದ ಕೊಟ್ಟಿಗೆಯ ಮೇಲೆ ದಾಳಿ ನಡೆಸಿದ್ದಾರೆ.
ಈ ದಾಳಿಯ ಸಂದರ್ಭದಲ್ಲಿ 1 ಲಕ್ಷದ 52 ಸಾವಿರ ಮೌಲ್ಯದ 35 ಹಾಲಿನ ಪುಡಿಯ ಚೀಲಗಳು ಪತ್ತೆಯಾಗಿವೆ. ಅಲ್ಲದೇ 97 ಪ್ಯಾಕೇಟ್ ಪೌಷ್ಠಿಕ ಆಹಾರವೂ ಪತ್ತೆಯಾಗಿದೆ. ಈ ಸಂಬಂಧ ಸಹದೇವ ರುದ್ರಪ್ಪ ಎಂಬುವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆಯನ್ನು ಪೊಲೀಸರು ಕೈಗೊಂಡಿದ್ದಾರೆ.
‘ಯಶವಂತಪುರ ಮಾರುಕಟ್ಟೆ’ಯಿಂದ ನಾಲ್ಕು ಉತ್ಪನ್ನಗಳ ವಹಿವಾಟು ‘ದಾಸನಪುರಕ್ಕೆ ಶಿಫ್ಟ್’
ಬೆಂಗಳೂರು: ಯಶವಂತಪುರ ಕೃಷಿ ಉತ್ಪನ್ನ ಮಾರುಕಟ್ಟೆಯಿಂದ ನಾಲ್ಕು ಉತ್ಪನ್ನಗಳ ವಹಿವಾಟನ್ನು ದಾಸನಪುರ ಉಪ ಮಾರುಕಟ್ಟೆಗೆ ಸ್ಥಳಾಂತರ ಮಾಡಲಾಗುವುದು ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅವರು ವಿಧಾನಪರಿಷತ್ತಿಗೆ ತಿಳಿಸಿದರು.
ಪ್ರಶ್ನೋತ್ತರ ವೇಳೆಯಲ್ಲಿ ಎಂ.ನಾಗರಾಜು ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈರುಳ್ಳಿ, ಬೆಳ್ಳುಳ್ಳಿ, ಆಲೂಗಡ್ಡೆ ಮತ್ತು ಶುಂಠಿಯನ್ನು ಯಶವಂತಪುರ ಮುಖ್ಯ ಮಾರುಕಟ್ಟೆ ಪ್ರಾಂಗಣದಿಂದ ದಾಸನಪುರ ಉಪ ಮಾರುಕಟ್ಟೆಗೆ ಸ್ಥಳಾಂತರ ಮಾಡಲಾಗುವುದು ಎಂದು ಸ್ಪಷ್ಟಪಡಿಸಿದರು.
ನಾಲ್ಕು ಉತ್ಪನ್ನಗಳನ್ನು ದಾಸನಪುರ ಉಪ ಮಾರುಕಟ್ಟೆಗೆ ಸ್ಥಳಾಂತರ ಮಾಡಿರುವ ಸರ್ಕಾರದ ಕ್ರಮವನ್ನು ಕೆಲವು ವರ್ತಕರು ನ್ಯಾಯಾಲಯದಲ್ಲಿ ಪ್ರಶ್ನೆ ಮಾಡಿದ್ದರು.
ನ್ಯಾಯಾಲಯ ಸರ್ಕಾರದ ಆದೇಶವನ್ನು ಎತ್ತಿಹಿಡಿದಿದ್ದು, ಸರ್ಕಾರ ಈರುಳ್ಳಿ, ಬೆಳ್ಳುಳ್ಳಿ, ಆಲೂಗಡ್ಡೆ ಮತ್ತು ಶುಂಠಿ ವರ್ತಕರಿಗೆ ಉಪ ಮಾರುಕಟ್ಟೆ ಪ್ರಾಂಗಣದಲ್ಲಿ ಮಳಿಗೆ ಹಂಚಿಕೆ ಮಾಡಲಿದೆ ಎಂದು ತಿಳಿಸಿದರು.
ಯಶವಂತಪುರ ಎಪಿಎಂಸಿಯಲ್ಲಿ ಹೆಚ್ಚುತ್ತಿರುವ ವಾಹನ ದಟ್ಟಣೆಯನ್ನು ನಿಯಂತ್ರಣ ಹಾಗೂ ರೈತರ ಹಿತದೃಷ್ಟಿಯಿಂದ ದಾಸನಪುರದಲ್ಲಿ 67.25 ಎಕರೆ ಸರ್ಕಾರಿ ಭೂಮಿಯನ್ನು ಮಂಜೂರು ಮಾಡಲಾಗಿದೆ. ಈ ಪ್ರದೇಶದಲ್ಲಿ ರೂ 306.50 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಮಾರುಕಟ್ಟೆ ಅಭಿವೃದ್ಧಿಪಡಿಸಲಾಗಿದೆ. ಎಪಿಎಂಸಿಗಳನ್ನು ಹೊರತುಪಡಿಸಿ ರೈತರು ತಮ್ಮ ಕೃಷಿ ಉತ್ಪನ್ನಗಳನ್ನು ಮಾರಾಟ ಮಾಡಲು ಕಾಯ್ದೆ ಅಡಿ ವಿವಿಧ ಅವಕಾಶ ಕಲ್ಪಿಸಿ 4 ಖಾಸಗಿ ಮಾರುಕಟ್ಟೆ ಹಾಘೂ 65 ನೇರ ಖರೀದಿ ಕೇಂದ್ರಗಳನ್ನು ನಡೆಸಲು ಲೈಸೆನ್ಸ್ ನೀಡಲಾಗಿದೆ ಎಂದರು.
BREAKING : ಮಾ.22 ರಂದು ‘ಅಖಂಡ ಕರ್ನಾಟಕ ಬಂದ್’ : ವಾಟಾಳ್ ನಾಗರಾಜ್ ಅಧಿಕೃತ ಘೋಷಣೆ