ದಾವಣಗೆರೆ : ದಾವಣಗೆರೆ ತಾಲ್ಲೂಕಿನ ಶಿಶು ಅಭಿವೃದ್ದಿ ಯೋಜನೆ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 5 ಅಂಗನವಾಡಿ ಕಾರ್ಯಕರ್ತೆ ಮತ್ತು 82 ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳಿಗೆ ನೇಮಕ ಮಾಡಲು ಅರ್ಹ ಮಹಿಳಾ ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಮಹಿಳಾ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 9 ಕೊನೆಯ ದಿನ. ಅರ್ಜಿಯನ್ನು ವೆಬ್ ಸೈಟ್ http://karnemakaone.kar.nic.in/abcd/ ಸಲ್ಲಿಸಬಹುದು ಎಂದು ಶಿಶು ಅಭಿವೃದ್ದಿ ಯೋಜನಾಧಿಕಾರಿ ತಿಳಿಸಿದ್ದಾರೆ.
ಇನ್ನೂ ದಾವಣಗೆರೆ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ 5 ಶಿಶು ಅಭಿವೃದ್ದಿ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 34 ಅಂಗನವಾಡಿ ಕಾರ್ಯಕರ್ತೆಯರು, 4 ಮಿನಿ ಅಂಗನವಾಡಿ ಕಾರ್ಯಕರ್ತೆ ಹಾಗೂ 198 ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳಿಗೆ ನೇಮಕ ಮಾಡಲು ಅರ್ಹ ಮಹಿಳಾ ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಮಹಿಳಾ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 9 ಕೊನೆಯದಿನ. ಅರ್ಜಿಯನ್ನು ವೆಬ್ ಸೈಟ್ http://karnemakaone.kar.nic.in/abcd/ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದಾವಣಗೆರೆ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿ ದೂ.ಸಂ:08192-263219, ಹರಿಹರ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿ ದೂ.ಸಂ: 08192-241431, ಜಗಳೂರು ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿ ದೂ.ಸಂ: 08196-227132, ಹೊನ್ನಾಳಿ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿ ದೂ.ಸಂ: 08188-251283, ಚನ್ನಗಿರಿ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿ ದೂ.ಸಂ: 08189-228010 ನ್ನು ಸಂಪರ್ಕಿಸಬೇಕೆAದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕ ರಾಜಾನಾಯ್ಕ ತಿಳಿಸಿದ್ದಾರೆ.
ಶಿವಮೊಗ್ಗದ ಮಾಣಿ ಜಲಾಶಯದ ನೀರಿನ ಮಟ್ಟ ಏರಿಕೆ: ಪ್ರವಾಹ ಮುನ್ಸೂಚನೆ, ಜನರಿಗೆ ಸುರಕ್ಷಿತ ಸ್ಥಳಕ್ಕೆ ತೆರಳಲು ಸೂಚನೆ
RBI ನಿಂದ ಮಹತ್ವದ ತೀರ್ಮಾನ: ಈಗ ನಿಮ್ಮ ಚೆಕ್ ಅನ್ನು ಶೀಘ್ರದಲ್ಲೇ ಬ್ಯಾಂಕಿನಿಂದ ಕ್ಲೀಯರ್…!
ಶುಭ ದಿನ, ಗಳಿಗೆ, ನಕ್ಷೆತ್ರ ನೋಡಿ ಕುಮಾರಸ್ವಾಮಿ ಸಹೋದರನ ಆಸ್ತಿ ದಾಖಲೆ ಬಿಡುಗಡೆ: ಡಿಸಿಎಂ ಡಿ.ಕೆ ಶಿವಕುಮಾರ್