ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ಗೌರವಧನವನ್ನು ಇನ್ನೂ ₹1 ಸಾವಿರ ಹೆಚ್ಚಿಸಲಾಗುವುದು. ಈ ಮೊದಲು 2017ರಲ್ಲಿ ₹2 ಸಾವಿರ ಗೌರವಧನ ಏರಿಸಲಾಗಿತ್ತು. ಈ ಬಾರಿಯೂ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ₹1 ಸಾವಿರ ಹೆಚ್ಚಿಸಿದ್ದೇವೆ. ಮುಂದಿನ ದಿನಗಳಲ್ಲಿ ಇನ್ನೂ ₹1 ಸಾವಿರ ಜಾಸ್ತಿ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ಗೌರವಧನವನ್ನು ಇನ್ನೂ ₹1 ಸಾವಿರ ಹೆಚ್ಚಿಸಲಾಗುವುದು. ಈ ಮೊದಲು 2017ರಲ್ಲಿ ₹2 ಸಾವಿರ ಗೌರವಧನ ಏರಿಸಲಾಗಿತ್ತು. ಈ ಬಾರಿಯೂ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ₹1 ಸಾವಿರ ಹೆಚ್ಚಿಸಿದ್ದೇವೆ. ಮುಂದಿನ ದಿನಗಳಲ್ಲಿ ಇನ್ನೂ ₹1 ಸಾವಿರ ಜಾಸ್ತಿ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ… pic.twitter.com/ukeMamSCJc
— DIPR Karnataka (@KarnatakaVarthe) November 19, 2025
ಪಂಚ ಗ್ಯಾರಂಟಿ ಯೋಜನೆ ಗಳನ್ನು ನೀಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಸಾರಥ್ಯದ ನಮ್ಮ ಸರ್ಕಾರ ಗ್ಯಾರಂಟಿ ಸರ್ಕಾರ ಆಗಿದ್ದು, 2028ಕ್ಕೂ ನಮ್ಮದೆ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದರು.
ನಮ್ಮ ಪಕ್ಷದ ಯೋಜನೆಗಳನ್ನು ಬಿಜೆಪಿ ಬೇರೆ ರಾಜ್ಯಗಳಲ್ಲಿ ನಕಲು ಮಾಡುತ್ತಿದೆ. ಮಹಾರಾಷ್ಟ್ರದಲ್ಲಿ ನಮ್ಮ ಗೃಹಲಕ್ಷ್ಮಿ ಯೋಜನೆ ಮಾದರಿಯಲ್ಲಿ ಲಾಡ್ಲಿಬೆಹನ್ ಯೋಜನೆಯನ್ನು ಜಾರಿಗೊಳಿಸಲಾಗಿತ್ತು. ಚುನಾವಣೆ ವೇಳೆ ತಿಂಗಳಿಗೆ 2,500 ರೂಪಾಯಿಯಂತೆ ಮೂರು ತಿಂಗಳ ಹಣ ಹಾಕಲಾಗಿತ್ತು. ಆದರೆ, ಚುನಾವಣೆಯಲ್ಲಿ ಗೆದ್ದ ಬಳಿಕ ಯೋಜನೆಯನ್ನೆ ಪರಿಷ್ಕರಿಸಲಾಗಿದೆ. 2,500 ರೂಪಾಯಿಯಿಂದ 1500 ರೂಪಾಯಿಗೆ ಇಳಿಸಲಾಗಿದೆ. 3.50 ಕೋಟಿ ಫಲಾನುಭವಿಗಳ ಸಂಖ್ಯೆಯನ್ನು 1.50 ಕೋಟಿಗೆ ಇಳಿಸಲಾಗಿದೆ ಎಂದರು.
ಕಳೆದ ಬಾರಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಗೌರವ ಧನವನ್ನು 1000 ರೂಪಾಯಿ ಹೆಚ್ಚಿಸಲಾಗಿದೆ. ಶೀಘ್ರವೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮತ್ತೊಂದು ಸಾವಿರ ಹೆಚ್ಚಿಸುವಂತೆ ಮನವಿ ಮಾಡಲಾಗುವುದು. ಇದೇ ನಮ್ಮ ಸರ್ಕಾರದ ಮತ್ತೊಂದು ಗ್ಯಾರಂಟಿ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭರವಸೆ ನೀಡಿದರು.
SHOCKING: ಶಿಕ್ಷಕ ಅವಮಾನಿಸಿದ್ದಕ್ಕೆ ಮನನೊಂದು ಮೆಟ್ರೋ ನಿಲ್ದಾಣದಿಂದ ಹಾರಿ 10ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ
ALERT : ಈ `ಪಾಸ್ ವರ್ಡ್’ಗಳನ್ನು ಬಳಸಿದ್ರೆ ನಿಮ್ಮ `ಡೇಟಾ ಲೀಕ್’ ಆಗಬಹುದು ಎಚ್ಚರ.!








