ಶಿವಮೊಗ್ಗ: ರಾಜ್ಯದ ಅಂಗನವಾಡಿ ಕಾರ್ಯಕರ್ತೆಯರನ್ನು ಖಾಯಂ ಗೊಳಿಸೋ ಸಂಬಂಧ ಈಗಾಗಲೇ ಸಿಎಂ ಸಿದ್ಧರಾಮಯ್ಯ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಚರ್ಚೆ ನಡೆಸಿದ್ದಾರೆ. ಅಂಗನವಾಡಿ ಕಾರ್ಯಕರ್ತೆಯರನ್ನು ಖಾಯಂಗೊಳಿಸೋದು ಕಾಂಗ್ರೆಸ್ ಸರ್ಕಾರದ 6ನೇ ಗ್ಯಾರಂಟಿಯಾಗಿದೆ ಅಂತ ಶಾಸಕ ಬೇಳೂರು ಗೋಪಾಲಕೃಷ್ಣ ಭರವಸೆ ನೀಡಿದ್ದಾರೆ.

ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ನೆಹರು ಮೈದಾನದಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಪೋನ್ ವಿತರಿಸಿದ ಬಳಿಕ ಮಾತನಾಡಿದಂತ ಅವರು, ನಮ್ಮ ಸರ್ಕಾರಕ್ಕೆ ನಿಮ್ಮ ಬಗ್ಗೆ ಗೌರವವಿದೆ. ನಮ್ಮ ಸಂಪೂರ್ಣ ಬೆಂಬಲ ಕೂಡ ಇದೆ. ನಿಮ್ಮನ್ನು ಖಾಯಂ ಗೊಳಿಸುವುದು ನಮ್ಮ ಕಾಂಗ್ರೆಸ್ ಸರ್ಕಾರದ 6ನೇ ಗ್ಯಾರಂಟಿಯೂ ಆಗಿದೆ ಎಂಬುದಾಗಿ ಘೋಷಿಸಿದರು.

ಗ್ಯಾರಂಟಿ ಯೋಜನೆಯ ಗೃಹಲಕ್ಷ್ಮೀ ಯೋಜನೆಯಡಿ ಅಂಗನವಾಡಿ ಕಾರ್ಯಕರ್ತೆಯರನ್ನು ತರಲಾಗಿದೆ. ಇಲ್ಲಿನ ಅನೇಕ ಅಂಗನವಾಡಿ ಕಾರ್ಯಕರ್ತೆಯರು ಗೃಹಲಕ್ಷ್ಮೀ ಯೋಜನೆಯಡಿ ಪ್ರತಿ ತಿಂಗಳು 2000 ರೂ ಪಡೆಯುತ್ತಿದ್ದೀರಿ ಎಂದರು.

ಡೆಂಗ್ಯೂ ನಿಯಂತ್ರಣ ಕ್ರಮ ವಹಿಸಬೇಕು. ನಿಮ್ಮೆಲ್ಲರ ಸಹಕಾರದಿಂದ ಸಾಗರ ತಾಲೂಕಿನಲ್ಲಿ ಡೆಂಗ್ಯೂ ನಿಯಂತ್ರಣವಾಗಬೇಕು. ಆ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯೊಂದಿಗೆ ಸಹಕರಿಸಿ ಕೆಲಸ ಮಾಡುವಂತೆ ತಿಳಿಸಿದರು.

ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣ ಆರಂಭಿಸಲಾಗುತ್ತಿದೆ. ನಿಮ್ಮನ್ನೇ ಅಲ್ಲಿ ಶಿಕ್ಷಕರಾಗಿ ನೇಮಿಸೋದಕ್ಕೆ ಈಗಾಗಲೇ ಸಿಎಂ ಸಿದ್ಧರಾಮಯ್ಯ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಹಮತ ವ್ಯಕ್ತಪಡಿಸಿದ್ದಾರೆ. ನಿಮ್ಮನ್ನೇ ಅಂಗನವಾಡಿಗಳಲ್ಲಿ ಪ್ರಾರಂಭವಾಗುವಂತ LKG, UKG ಶಾಲೆಗಳಿಗೆ ಶಿಕ್ಷಕರನ್ನಾಗಿ ನೇಮಿಸುವಂತ ಆದೇಶ ಮಾಡುವುದು ಮಾತ್ರ ಬಾಕಿಯಿದೆ ಎಂದರು.

ಅಂಗನವಾಡಿ ಕಟ್ಟಡಗಳು ದುರಸ್ಥಿಯಲ್ಲಿದ್ದರೇ ಕೂಡಲೇ ನನ್ನ ಗಮನಕ್ಕೆ ತರಬೇಕು. ಶಿಥಿಲಾವಸ್ಥೆಯಲ್ಲಿರುವಂತ ಅಂಗನವಾಡಿಗಳಲ್ಲಿ ಮಕ್ಕಳನ್ನು ಕೂರಿಸಿಕೊಂಡು ಪಾಠ ಮಾಡಬೇಡಿ. ಪರ್ಯಾಯ ಕಟ್ಟಡದಲ್ಲಿ ವ್ಯವಸ್ಥೆ ಮಾಡಿಕೊಂಡು ನಡೆಸುವಂತೆ ಶಾಸಕ ಬೇಳೂರು ಗೋಪಾಲಕೃಷ್ಣ ಸೂಚಿಸಿದರು.

ಮುಂದಿನ ದಿನಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರನ್ನು ಖಾಯಂಗೊಳಿಸುವ ಕೂಗಿಗೆ ನನ್ನ ಬೆಂಬಲವಿದೆ. ನಿಮ್ಮ ಜೊತೆಗೆ ಹೋರಾಟದಲ್ಲಿ ನಾನು ಭಾಗಿಯಾಗುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಸಾಗರ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಗಂಗಾಬಾಯಿ, ಉಪ ವಿಭಾಧಿಕಾರಿ ಯತೀಶ್, ಕಾರ್ಯನಿರ್ವಹಣಾಧಿಕಾರಿ ಶಣೈ, ಟಿಹೆಚ್ಓ ಡಾ.ಭರತ್, ಸಾಗರ ನಗರಸಭೆಯ ಸದಸ್ಯರು ಸೇರಿದಂತೆ ಇತರರು ಹಾಜರಿದ್ದರು.

ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು

ಚಿಕ್ಕಬಳ್ಳಾಪುರ : ಅನೈತಿಕ ಸಂಬಂಧ ಆರೋಪ : ಪತ್ನಿಯನ್ನು ಮಚ್ಚಿನಿಂದ ಭೀಕರವಾಗಿ ಹತ್ಯೆಗೈದ ಪತಿ

BREAKING: ದೆಹಲಿ CM ಅರವಿಂದ್ ಕೇಜ್ರಿವಾಲ್‌ಗೆ ಜೈಲೇಗತಿ, ಜಾಮೀನು ಆದೇಶಕ್ಕೆ ದೆಹಲಿ ಹೈಕೋರ್ಟ್‌ ತಡೆ

Share.
Exit mobile version