ಬೆಂಗಳೂರು : ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಪತ್ನಿ ಹಾಗೂ ಶಾಸಕಿ ಅನಿತಾ ಕುಮಾರಸ್ವಾಮಿ ಅವರಿಗೆ ಕೊರೊನಾ ಪಾಸಿಟಿವ್ ಧೃಡವಾಗಿದೆ ಎಂದು ತಿಳಿದು ಬಂದಿದೆ.
ಕಳೆದ ಎರಡು ದಿನದ ಹಿಂದೆ ರಾಮನಗರಕ್ಕೆ ಬಂದಿದ್ದ ಶಾಸಕಿ ಅಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದರು. ಅಲ್ಲಿಂದ ವಾಪಸ್ಸಾದ ಬಳಿಕ ಅವರಿಗೆ ಕೊರೊನಾ ಸೋಂಕು ತಗುಲಿರುವುದು ಧೃಡವಾಗಿದೆ.ಸದ್ಯ ಬೆಂಗಳೂರಿನ ನಿವಾಸದಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದು, ಬೆಂಗಳೂರಿನ ನಿವಾಸದಲ್ಲೇ ಹೋಂ ಐಸೋಲೇಷನ್ ಗೆ ಒಳಗಾಗಿದ್ದಾರೆ ಎಂದು ತಿಳಿದು ಬಂದಿದೆ.
ರಾಜ್ಯದಲ್ಲಿ ಕೊರೊನಾ ಮಹಾಸ್ಪೋಟ
ರಾಜ್ಯದಲ್ಲಿ ಮತ್ತೆ ಇಂದು ಕೊರೋನಾ (Coronavirus ) ಮಹಾಸ್ಪೋಟವೇ ಉಂಟಾಗಿದೆ. ಬೆಂಗಳೂರಿನಲ್ಲಿ 22,284 ಸೇರಿದಂತೆ ರಾಜ್ಯಾಧ್ಯಂತ 32,793 ಜನರಿಗೆ ಕೋವಿಡ್ ಪಾಸಿಟಿವ್ ( Corona Positive ) ಎಂಬುದಾಗಿ ದೃಢಪಟ್ಟಿದೆ. ಈ ಕುರಿತಂತೆ ಟ್ವಿಟ್ಟರ್ ನಲ್ಲಿ ( Twitter ) ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ( Minister Dr K Sudhakar ) ಅವರು ಮಾಹಿತಿ ನೀಡಿದ್ದು, ಇದೇ ವೇಳೆ ಅವರು ಕಳೆದ 24 ಗಂಟೆಯಲ್ಲಿ 2,18,479 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ ಅಂತ ತಿಳಿಸಿದ್ದಾರೆ.
ಇವರಲ್ಲಿ ಬೆಂಗಳೂರಿನಲ್ಲಿ 22,284 ಸೇರಿದಂತೆ ರಾಜ್ಯದಲ್ಲಿ 32,793ಜನರಿಗೆ ಕೋವಿಡ್ ದೃಢಪಟ್ಟಿರೋದಾಗಿ ತಿಳಿಸಿದ್ದಾರೆ. ಇಂದು ರಾಜ್ಯದಲ್ಲಿ 32,793 ಜನರಿಗೆ ಕೊರೋನಾ ದೃಢಪಟ್ಟ ಕಾರಣ ಪಾಸಿಟಿವಿಟಿ ದರ ಶೇ. 15%ಕ್ಕೆ ಏರಿಕೆಯಾಗಿದೆ. ಸಕ್ರೀಯ ಪ್ರಕರಣಗಳ ಸಂಖ್ಯೆ 1,69,850ಕ್ಕೆ ಏರಿಕೆಯಾಗಿವೆ ಎಂದು ತಿಳಿಸಿದ್ದಾರೆ. ಕಳೆದ 24 ಗಂಟೆಯಲ್ಲಿ ಸೋಂಕಿತರಾದಂತ 4,273 ಜನರು ಗುಣಮುಖರಾಗಿದ್ದಾರೆ. ಸೋಂಕಿನಿಂದಾಗಿ ಬೆಂಗಳೂರಿನಲ್ಲಿ 05 ಜನರು ಸೇರಿದಂತೆ 07 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದಾರೆ.