ನವದೆಹಲಿ: ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್ಸಿಪಿ) ಹಿರಿಯ ಮುಖಂಡ ಮತ್ತು ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್ಮುಖ್ ಅವರ ಕಾರಿನ ಮೇಲೆ ಕೆಲವು ಅಪರಿಚಿತ ವ್ಯಕ್ತಿಗಳು ಸೋಮವಾರ ನಾಗ್ಪುರ ಜಿಲ್ಲೆಯ ಕಟೋಲ್-ಜಲಾಲ್ಖೇಡಾ ರಸ್ತೆಯಲ್ಲಿ ಕಲ್ಲುಗಳಿಂದ ದಾಳಿ ನಡೆಸಿದ ಪರಿಣಾಮ ಅವರು ಗಾಯಗೊಂಡಿದ್ದಾರೆ.
ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಮಹಾ ವಿಕಾಸ್ ಅಘಾಡಿ (ಎಂವಿಎ) ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ತಮ್ಮ ಪುತ್ರ ಸಲೀಲ್ ದೇಶ್ಮುಖ್ ಅವರ ಪರವಾಗಿ ಪ್ರಚಾರ ನಡೆಸುತ್ತಿದ್ದ ದೇಶ್ಮುಖ್ ಅವರು ನರ್ಖೇಡ್ನಲ್ಲಿ ಸಾರ್ವಜನಿಕ ಸಭೆಯಿಂದ ಹಿಂದಿರುಗುತ್ತಿದ್ದಾಗ ಈ ಘಟನೆ ನಡೆದಿದೆ.
‘ಒಂದೇ ದಿನದಲ್ಲಿ 5 ಲಕ್ಷ ನಾಗರಿಕರು ಪ್ರಯಾಣ’ : ಇತಿಹಾಸ ನಿರ್ಮಿಸಿದ ‘ಭಾರತೀಯ ವಾಯುಯಾನ’