ಹುಬ್ಬಳ್ಳಿ : ಹುಬ್ಬಳ್ಳಿ ಅಂಜಲಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳ ತಂಡವು ಇದೀಗ ಮೃತ ಅಂಜಲಿಯ ಅಜ್ಜಿ ಹಾಗೂ ಸಹೋದರಿ ಯಶೋಧ ಹತ್ತಿರ CID ಅಧಿಕಾರಿಗಳು ಮಾಹಿತಿ ಪಡೆದುಕೊಂಡಿದ್ದಾರೆ.
ಹೌದು ಇಂದು CID ಅಧಿಕಾರಿಗಳು ಮೃತ ಅಂಜಲಿ ಮನೆಗೆ ಭೇಟಿ ನೀಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಅವರು ಅಂಜಲಿ ಅಜ್ಜಿ ಹಾಗೂ ಸಹೋದರಿ ಯಶೋಧ ಬಳಿ ಮಾಹಿತಿಯನ್ನು ಸಂಗ್ರಹಿಸಿದ್ದಾರೆ. ಅಲ್ಲದೆ ಅಂಜಲಿ ಮನೆಯ ಸುತ್ತ ಮುತ್ತಲಿನ ಸ್ಥಳೀಯರಲ್ಲಿ ಕೂಡ CID ಅಧಿಕಾರಿಗಳು ಮಾಹಿತಿ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಆರೋಪಿ ವಿಶ್ವ 15 ದಿನ ‘CID’ ಕಸ್ಟಡಿಗೆ
ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ವಿಶ್ವನನ್ನು ಎಂಟು ದಿನ ಸಿಐಡಿ ಕಸ್ಟಡಿಗೆ ನೀಡಿ ನ್ಯಾಯಮೂರ್ತಿ ನಾಗೇಶ್ ನಾಯ್ಕ್ ಅವರು ಆದೇಶಿಸಿದ್ದಾರೆ. ವಿಶ್ವ ಅಲಿಯಾಸ್ ಗಿರೀಶ್ನನ್ನು ಮತ್ತೆ 15 ದಿನ ಕಸ್ಟಡಿಗೆ ನೀಡುವಂತೆ ಸಿಐಡಿ(CID) ಮನವಿ ಮಾಡಿತ್ತು. ಈ ಹಿನ್ನಲೆ ಇಂದು ಹುಬ್ಬಳ್ಳಿ ಒಂದನೇ ಸಿವಿಲ್ ನ್ಯಾಯಾಲಯ, ಜೆಎಂಎಫ್ಸಿ ಕೋರ್ಟ್ ವಿಚಾರಣೆ ನಡೆಸಿತ್ತು. ಈ ವೇಳೆ ಆರೋಪಿ ನ್ಯಾಯಾಧೀಶರ ಮುಂದೆ ಕಣ್ಣೀರು ಹಾಕಿದ್ದಾನೆ. ಇದಕ್ಕೆ ಹತ್ಯೆ ಮಾಡುವಾಗ ಗೊತ್ತಾಗಲಿಲ್ವಾ ಎಂದು ಜಡ್ಜ್ ಗದರಿದರು.