ಬೆಳಗಾವಿ: ಕಬ್ಬಿನ ದರ ಹೆಚ್ಚಿಸುವಂತೆ ಒತ್ತಾಯಸಿ ಕಬ್ಬು ಬೆಳೆಗಾರರು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಪ್ರತಿಭಟನಕಾರರು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.
ಹುಕ್ಕೇರಿ ತಾಲೂಕಿನ ಹತ್ತರಗಿಯಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು ಆಕ್ರೋಶ ವ್ಯಕ್ತಪಡಿಸಿದ ರೈತರು ಬಳಿಕ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಹೊರಟ ಪ್ರತಿಭನಕಾರರು ಪೊಲೀಸರು ತಡೆಹಿಡಿದಿದ್ದಾರೆ. ಇದರಿಂದ ಆಕ್ರೋಶಗೊಂಡ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ಮಾತಿನ ಚಕಾಮಕಿ ನಡೆಯಿತು. ಪರಿಸ್ಥಿತಿ ಹತೋಟಿಗೆ ತರಲು ಪೊಲೀಸರು ರೈತರನ್ನು ವಶಕ್ಕೆ ಪಡೆದರು.
ಪ್ರತಿ ಟನ್ ಕಬ್ಬಿಗೆ 5500 ರೂಪಾಯಿ ದರ ನಿಗದಿ ಮಾಡುವಂತೆ ಒತ್ತಾಯಿಸಿ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಹೊರಟ ರೈತರನ್ನು ಹತ್ತರಗಿ ಟೋಲ್ಗೇಟ್ ಬಳಿಯೇ ಪೊಲೀಸರು ತಡೆದಿದ್ದಾರೆ. ಈ ವೇಳೆ ಅರೆಬೆತ್ತಲೆಯಾಗಿ ರೈತರು ಪ್ರತಿಭಟನೆ ನಡೆಸಿದ್ದಲ್ಲದೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು.