ಚೆನ್ನೈ: ತಮಿಳುನಾಡು ಬಿಜೆಪಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯುವುದಾಗಿ ಅಣ್ಣಾಮಲೈ ಘೋಷಿಸಿದ್ದಾರೆ. ಈ ಮೂಲಕ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅಣ್ಣಾಮಲೈ ರಾಜೀನಾಮೆಯಲ್ಲಿ ಸಲ್ಲಿಸಿದಂತೆ ಆಗಿದೆ.
ವರದಿಗಳ ಪ್ರಕಾರ, ರಾಜ್ಯದಲ್ಲಿ ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಬಿಜೆಪಿ ಮತ್ತು ಎಐಎಡಿಎಂಕೆ ನಡುವಿನ ಮೈತ್ರಿ ಮಾತುಕತೆಗಳು ಅವರ ನಿರ್ಗಮನಕ್ಕೆ ಕಾರಣವಾಗಿದೆ.
ಮುಂದಿನ ನಾಯಕನನ್ನು ಪಕ್ಷದ ಎಲ್ಲಾ ಸದಸ್ಯರು ಸರ್ವಾನುಮತದಿಂದ ನಿರ್ಧರಿಸುತ್ತಾರೆ ಎಂದು ಬಿಜೆಪಿ ನಾಯಕ ದೃಢಪಡಿಸಿದರು.
ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ ಏಪ್ರಿಲ್ 7 ರಂದು ನಡೆಯಲಿದ್ದು, ಏಪ್ರಿಲ್ 9 ರಂದು ಘೋಷಣೆ ಮಾಡಲಾಗುವುದು ಎಂದು ಮೂಲಗಳು ತಿಳಿಸಿವೆ. ತೆಲಂಗಾಣ ಬಿಜೆಪಿ ಅಧ್ಯಕ್ಷ ಕಿಶನ್ ರೆಡ್ಡಿ ಅವರು ಏಪ್ರಿಲ್ 7 ರಂದು ತಮಿಳುನಾಡಿಗೆ ಭೇಟಿ ನೀಡಲಿದ್ದು, ಹೊಸ ರಾಜ್ಯ ಅಧ್ಯಕ್ಷರ ನೇಮಕದ ಬಗ್ಗೆ ಚರ್ಚಿಸಲಿದ್ದಾರೆ.
ಭಾರತೀಯ ರೈಲ್ವೆಯ ನಾಲ್ಕು ಮಲ್ಟಿಟ್ರಾಕಿಂಗ್ ಯೋಜನೆಗಳಿಗೆ ಕೇಂದ್ರ ಸಂಪುಟದ ಅನುಮೋದನೆ
ಸಾವರ್ಕರ್ ಬಗ್ಗೆ ಅವಹೇಳನಕಾರಿ ಹೇಳಿಕೆ: ರಾಹುಲ್ ಗಾಂಧಿಗೆ ನೀಡಿದ್ದ ಸಮನ್ಸ್ ರದ್ದತಿಗೆ ಕೋರ್ಟ್ ನಕಾರ