Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕಸ ಸಂಸ್ಕರಣೆ ನೆಪದಲ್ಲಿ 39,000 ಕೋಟಿ ಹಗರಣ, 10,000 ಕೋಟಿ ಕಿಕ್‌ಬ್ಯಾಕ್‌: ಆರ್‌.ಅಶೋಕ ಗಂಭೀರ ಆರೋಪ

BIG NEWS : ಬೆಂಗಳೂರಲ್ಲಿ ಕೆಲಸ ಮಾಡುತ್ತಿದ್ದ ಮನೆಯಲ್ಲೇ 25 ಲಕ್ಷ ದರೋಡೆ : ನೇಪಾಳದ ದಂಪತಿ ಅರೆಸ್ಟ್!

BIG NEWS: 2026-27ನೇ ಸಾಲಿನ 1ನೇ ತರಗತಿ ದಾಖಲಾತಿಗೆ ವಯೋಮಿತಿ ಸಡಿಲಿಕೆ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಲ್ಲಿ ತೇಜಸ್ವೀ ಸೂರ್ಯ ಪರ ಅಣ್ಣಾಮಲೈ ಅಬ್ಬರದ ಪ್ರಚಾರ, ಬೃಹತ್‌ ರೋಡ್‌ ಶೋ
KARNATAKA

ಬೆಂಗಳೂರಲ್ಲಿ ತೇಜಸ್ವೀ ಸೂರ್ಯ ಪರ ಅಣ್ಣಾಮಲೈ ಅಬ್ಬರದ ಪ್ರಚಾರ, ಬೃಹತ್‌ ರೋಡ್‌ ಶೋ

By ವಸಂತ ಬಿ ಈಶ್ವರಗೆರೆ

ಬೆಂಗಳೂರು : ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರು ಹಾಗೂ ಮಾಜಿ ಪೊಲೀಸ್‌ ಅಧಿಕಾರಿ ಅಣ್ಣಾಮಲೈ ಅವರು ಸೋಮವಾರ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವೀ ಸೂರ್ಯ ಪರ ಜಯನಗರ, ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರಗಳಲ್ಲಿ ಅಬ್ಬರದ ರೋಡ್‌ ಶೋ ನಡೆಸಿ ಮತ ಯಾಚಿಸಿದರು.

ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡಿದ ತೇಜಸ್ವೀ ಸೂರ್ಯ, “ನವಭಾರತದ ನಿರ್ಮಾಣದಲ್ಲಿ ಯುವಶಕ್ತಿಯ ಪಾತ್ರ ಬಹುದೊಡ್ಡದಿದ್ದು ಅದರಂತೆ ಪ್ರಧಾನಿ ನರೇಂದ್ರಮೋದಿಯವರು ಯುವ ಸಬಲೀಕರಣಕ್ಕೆ ಹೆಚ್ಚು ಒತ್ತು ನೀಡಿ ಅನೇಕ ಯೋಜನೆಗಳು ಮತ್ತು ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದಾರೆ. ರಕ್ಷಣಾ ಪಡೆಗಳಲ್ಲಿ ಹೆಣ್ಣು ಮಕ್ಕಳ ಸಂಖ್ಯೆ ಎರಡು ಪಟ್ಟು ಹೆಚ್ಚಿದೆ. ಸರ್ಕಾರದ ಪ್ರೋತ್ಸಾಹದಿಂದ ಯುವಜನರಲ್ಲಿ ಕ್ರೀಡಾಸಕ್ತಿ ಹೆಚ್ಚುತ್ತಿದ್ದು, ವಿವಿಧ ವಲಯಗಳಲ್ಲಿ ತಮ್ಮ ಪ್ರತಿಭೆ, ಸಾಮರ್ಥ್ಯ ತೋರಲು ಸಾಧ್ಯವಾಗಿದೆ. ಖೇಲೋ ಇಂಡಿಯಾ ಕಾರ್ಯಕ್ರಮ ಕ್ರೀಡಾ ವಲಯದಲ್ಲಿ ಬಹು ದೊಡ್ಡ ಬದಲಾವಣೆಯನ್ನು ತಂದಿದ್ದು, ಅಪಾರ ಕ್ರೀಡಾ ಪ್ರತಿಭೆಗಳು ಬೆಳಕಿಗೆ ಬರಲು ಕಾರಣವಾಗಿದೆ. ಒಲಿಂಪಿಕ್ಸ್‌, ಏಷ್ಯನ್‌ ಕ್ರೀಡಾಕೂಟ ಸೇರಿದಂತೆ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾ ಕೂಟಗಳಲ್ಲಿ ಭಾರತೀಯ ಕ್ರೀಡಾಪಟುಗಳು ದೊಡ್ಡ ಸಾಧನೆ ಮಾಡುತ್ತಿದ್ದಾರೆ. ಸ್ಕಿಲ್‌ ಇಂಡಿಯಾ,ಮೇಕ್‌ ಇನ್‌ ಇಂಡಿಯಾ, ಫಿಟ್‌ ಇಂಡಿಯಾ ಸೇರಿದಂತೆ ಅನೇಕ ಕಾರ್ಯಕ್ರಮಗಳಿಂದ ಯುವಜನರ ಸಬಲೀಕರಣವಾಗುತ್ತಿದೆ. ಮೋದಿಯವರು ಯುವಶಕ್ತಿಗೆ ಚೈತನ್ಯ ತುಂಬಿ, ಪ್ರೋತ್ಸಾಹಿಸುತ್ತಲೇ ಬಂದಿದ್ದಾರೆ” ಎಂದು ಹೇಳಿದರು.

“ದಕ್ಷ ಪೊಲೀಸ್‌ ಅಧಿಕಾರಿಯಾಗಿ ಅಣ್ಣಾಮಲೈ ಅವರು ರಾಜ್ಯದಲ್ಲಿ ಒಳ್ಳೆಯ ಕೆಲಸಗಳನ್ನು ಮಾಡಿ ಜನರ ಪ್ರೀತಿ ಗಳಿಸಿದ್ದಾರೆ. ಇದೀಗ ರಾಜಕೀಯ ಪ್ರವೇಶಿಸಿ ತಮಿಳುನಾಡಿನಲ್ಲಿ ಡಿಎಂಕೆ ಮತ್ತು ಎದುರಾಳಿ ಪಕ್ಷಗಳಿಗೆ ನಿದ್ದೆಗೆಡಿಸಿದ್ದಾರೆ. ಯುವ ಪ್ರತಿಭೆಗೆ ಬಿಜೆಪಿ ತಮಿಳುನಾಡಿನ ಸಾರಥ್ಯ ನೀಡಿದ್ದು, ರಾಜ್ಯದಲ್ಲಿ ಶ್ರೀ ಅಣ್ಣಾಮಲೈ ಅವರು ಪಕ್ಷವನ್ನು ಬಲಪಡಿಸಿದ್ದಾರೆ” ಎಂದು ತೇಜಸ್ವೀ ಸೂರ್ಯ ಹೇಳಿದರು.

ಅಣ್ಣಾಮಲೈ ಅವರು ಮಾತನಾಡಿ, “ಕರ್ನಾಟಕದಲ್ಲಿನ ಕಾಂಗ್ರೆಸ್‌ ಸರ್ಕಾರ, ತಮಿಳುನಾಡಿನ ಡಿ.ಎಂ.ಕೆ ಸರ್ಕಾರ ಒಂದೇ ನಾಣ್ಯದ ಎರಡು ಮುಖಗಳು. ಭಯೋತ್ಪಾದಕ ಕೃತ್ಯಗಳನ್ನು ಬೆಂಬಲಿಸುವುದು, ಕಾನೂನು ಸುವ್ಯವಸ್ಥೆ ಗಾಳಿಗೆ ತೂರುವುದು, ಸಮಾಜಘಾತುಕ ಶಕ್ತಿಗಳನ್ನು ಪೋಷಿಸುವುದು ಈ ಪಕ್ಷಗಳ ಕಾರ್ಯಸೂಚಿಯಾಗಿದೆ. ತಮಿಳುನಾಡಿನಲ್ಲಿ ಈ ಬಾರಿ ಹೊಸ ಅಲೆ ಸೃಷ್ಟಿಯಾಗಿದ್ದು, ಬಿಜೆಪಿ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ. ತೇಜಸ್ವೀ ಸೂರ್ಯ ಅವರು ಚಿಕ್ಕ ವಯಸ್ಸಿನಲ್ಲೇ ಸಂಸದರಾಗಿ ಕ್ಷೇತ್ರದಲ್ಲಿ ಜನಪ್ರಿಯತೆ ಗಳಿಸಿಕೊಂಡಿದ್ದಾರೆ. ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷರಾಗಿ ಯುವಶಕ್ತಿಗೆ ಸ್ಫೂರ್ತಿ ತುಂಬುತ್ತಿದ್ದಾರೆ. ಸೂರ್ಯ ರವರ ಕಾರ್ಯವೈಖರಿಯಿಂದ ಅತ್ಯುತ್ತಮ ಯುವ ಸಂಸದ ಗೌರವ ಸಿಕ್ಕಿದ್ದು, ಇಂತಹವರು ಲೋಕಸಭೆಯಲ್ಲಿ ಬೆಂಗಳೂರು ದಕ್ಷಿಣವನ್ನು ಪ್ರತಿನಿಧಿಸಿರುವುದರಿಂದ ಬೆಂಗಳೂರಿಗೆ ಅನೇಕ ಯೋಜನೆಗಳು ಬರಲು ಸಾಧ್ಯವಾಗಿದೆ. ಬೆಂಗಳೂರಿನ ಅಭಿವೃದ್ಧಿಯ ಬಗೆಗೆ ತೇಜಸ್ವೀ ಸೂರ್ಯ ರವರಿಗೆ ಅನೇಕ ಕನಸುಗಳಿವೆ. ನನ್ನ ಸಹೋದರ ತೇಜಸ್ವೀ ಯನ್ನು ಅಧಿಕ ಮತಗಳ ಅಂತರದಿಂದ ಮತ್ತೊಮ್ಮೆ ಗೆಲ್ಲಿಸಿ, ಆಶೀರ್ವದಿಸಿ ” ಎಂದು ಹೇಳಿದರು

ಶಾಸಕರಾದ ಸಿ.ಕೆ.ರಾಮಮೂರ್ತಿ, ಉದಯ್ ಗರುಡಾಚಾರ್ ಸೇರಿದಂತೆ ಅಪಾರ ಸಂಖ್ಯೆಯ ಬಿಜೆಪಿ-ಜೆಡಿಎಸ್‌ ಕಾರ್ಯಕರ್ತರು ಪ್ರಚಾರದಲ್ಲಿ ಪಾಲ್ಗೊಂಡಿದ್ದರು.

ನೇಹ ಸಾವು ಕೇಸ್: ಕೊಲೆಗಡುಕನನ್ನು ಗಲ್ಲಿಗೇರಿಸುವವರೆಗೂ ಹೋರಾಟ ನಿಲ್ಲುವುದಿಲ್ಲ: ಬಸವರಾಜ ಬೊಮ್ಮಾಯಿ

ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ : ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿ

Share. Facebook Twitter LinkedIn WhatsApp Email

Related Posts

ಕಸ ಸಂಸ್ಕರಣೆ ನೆಪದಲ್ಲಿ 39,000 ಕೋಟಿ ಹಗರಣ, 10,000 ಕೋಟಿ ಕಿಕ್‌ಬ್ಯಾಕ್‌: ಆರ್‌.ಅಶೋಕ ಗಂಭೀರ ಆರೋಪ

3 Mins Read

BIG NEWS : ಬೆಂಗಳೂರಲ್ಲಿ ಕೆಲಸ ಮಾಡುತ್ತಿದ್ದ ಮನೆಯಲ್ಲೇ 25 ಲಕ್ಷ ದರೋಡೆ : ನೇಪಾಳದ ದಂಪತಿ ಅರೆಸ್ಟ್!

1 Min Read

BIG NEWS: 2026-27ನೇ ಸಾಲಿನ 1ನೇ ತರಗತಿ ದಾಖಲಾತಿಗೆ ವಯೋಮಿತಿ ಸಡಿಲಿಕೆ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ

2 Mins Read
Recent News

ಕಸ ಸಂಸ್ಕರಣೆ ನೆಪದಲ್ಲಿ 39,000 ಕೋಟಿ ಹಗರಣ, 10,000 ಕೋಟಿ ಕಿಕ್‌ಬ್ಯಾಕ್‌: ಆರ್‌.ಅಶೋಕ ಗಂಭೀರ ಆರೋಪ

BIG NEWS : ಬೆಂಗಳೂರಲ್ಲಿ ಕೆಲಸ ಮಾಡುತ್ತಿದ್ದ ಮನೆಯಲ್ಲೇ 25 ಲಕ್ಷ ದರೋಡೆ : ನೇಪಾಳದ ದಂಪತಿ ಅರೆಸ್ಟ್!

BIG NEWS: 2026-27ನೇ ಸಾಲಿನ 1ನೇ ತರಗತಿ ದಾಖಲಾತಿಗೆ ವಯೋಮಿತಿ ಸಡಿಲಿಕೆ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ

ಶಿಕ್ಷಣದಿಂದ ಮಾತ್ರ ಸಾಮಾಜಿಕ, ಆರ್ಥಿಕ ಸಬಲತೆ ಸಾಧ್ಯ: ಸಾಗರ ಕರವೇ ತಾಲೂಕು ಅಧ್ಯಕ್ಷ ಮನೋಜ್ ಕುಗ್ವೆ

State News
KARNATAKA

ಕಸ ಸಂಸ್ಕರಣೆ ನೆಪದಲ್ಲಿ 39,000 ಕೋಟಿ ಹಗರಣ, 10,000 ಕೋಟಿ ಕಿಕ್‌ಬ್ಯಾಕ್‌: ಆರ್‌.ಅಶೋಕ ಗಂಭೀರ ಆರೋಪ

By ವಸಂತ ಬಿ ಈಶ್ವರಗೆರೆ KARNATAKA 3 Mins Read

ಬೆಂಗಳೂರು : ಕಾಂಗ್ರೆಸ್‌ ಸರ್ಕಾರ ಬೆಂಗಳೂರಿನಲ್ಲಿ ಕಸ ಸಂಸ್ಕರಣೆ ಮಾಡುವ ನೆಪದಲ್ಲಿ 39,000 ಕೋಟಿ ರೂ. ಹಗರಣ ನಡೆಸಿದೆ. 35…

BIG NEWS : ಬೆಂಗಳೂರಲ್ಲಿ ಕೆಲಸ ಮಾಡುತ್ತಿದ್ದ ಮನೆಯಲ್ಲೇ 25 ಲಕ್ಷ ದರೋಡೆ : ನೇಪಾಳದ ದಂಪತಿ ಅರೆಸ್ಟ್!

BIG NEWS: 2026-27ನೇ ಸಾಲಿನ 1ನೇ ತರಗತಿ ದಾಖಲಾತಿಗೆ ವಯೋಮಿತಿ ಸಡಿಲಿಕೆ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ

ಶಿಕ್ಷಣದಿಂದ ಮಾತ್ರ ಸಾಮಾಜಿಕ, ಆರ್ಥಿಕ ಸಬಲತೆ ಸಾಧ್ಯ: ಸಾಗರ ಕರವೇ ತಾಲೂಕು ಅಧ್ಯಕ್ಷ ಮನೋಜ್ ಕುಗ್ವೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.