ಬೆಂಗಳೂರು: ಗ್ರಾಮಗಳಲ್ಲ ವಾಸವಿದ್ದು, ವ್ಯವಸಾಯ ಮಾಡುವ ಗಂಡು ಮಕ್ಕಳನ್ನು ಮದುವೆ ಆಗುವ ಹೆಣ್ಣು ಮಕ್ಕಳಗೆ ಮುಂಬರುವ ಅಧಿವೇಶನದಲ್ಲಿ ವಿಶೇಷ ಭತ್ಯೆ ಹಾಗೂ ಸ್ಥಾನಮಾನ ಘೋಷಿಸುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಕುಣಿಗಲ್ ಶಾಸಕ ಡಾ.ಹೆಚ್.ಡಿ ರಂಗನಾಥ್ ಪತ್ರ ಬರೆದು ಮನವಿ ಮಾಡಿದ್ದಾರೆ.
ಈ ಕುರಿತಂತೆ ಸಿಎಂ ಸಿದ್ಧರಾಮಯ್ಯ ಅವರಿಗೆ ಪತ್ರ ಬರೆದಿರುವಂತ ಕುಣಿಗಲ್ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಹೆಚ್.ಡಿ ರಂಗನಾಥ್ ಅವರು, ನನ್ನ ಮತಕ್ಷೇತ್ರ ಕುಣಿಗಲ್ ತಾಲ್ಲೂಕು ಗ್ರಾಮೀಣ ಪ್ರದೇಶವಾಗಿದ್ದು, ವ್ಯವಸಾಯ ಅವಲಂಭನೆ ಹೆಚ್ಚಿರುತ್ತದೆ ಹಾಗೂ ಗ್ರಾಮಗಳಲ್ಲಿ ಹೆಚ್ಚಿನ ಯುವಕರು ವಾಸವಿದ್ದು, ವ್ಯವಸಾಯ ಮಾಡಿಕೊಂಡು ಜೀವನ ಮಾಡುತ್ತಿದ್ದು, ಇವರನ್ನು ಮದುವೆ ಆಗಲು ಹೆಣ್ಣು ಮಕ್ಕಳು ನಿರಾಕರಿಸುತ್ತಿದ್ದು, ಮೂವತ್ತು ವರ್ಷ ದಾಟದರೂ ಮದುವೆ ಆಗದೆ, ತೊಂದರೆಯಲ್ಲಿರುತ್ತಾರೆ ಎಂಬುದಾಗಿ ಅಲವತ್ತುಕೊಂಡಿದ್ದಾರೆ.
ಈ ಹಿನ್ನಲೆಯಲ್ಲಿ ತಾವುಗಳು ಹಳ್ಳಗಳಲ್ಲಿ ವಾಸವಿದ್ದು, ವ್ಯವಸಾಯ ಮಾಡಿಕೊಂಡಿರುವ ಗಂಡು ಮಕ್ಕಳನ್ನು ಮದುವೆ ಆಗುವ ಹೆಣ್ಣು ಮಕ್ಕಳಿಗೆ ಮುಂಬರುವ ಅಧಿವೇಶನದಲ್ಲಿ ವಿಶೇಷ ಭತ್ಯೆ ಹಾಗೂ ಅವರಿಗೆ ವಿಶೇಷ ಸ್ಥಾನಮಾನವನ್ನು ಘೋಷಿಸಬೇಕಾಗಿ ಕೋರಿದ್ದಾರೆ. ಆ ಮೂಲಕ ವ್ಯವಸಾಯ ಮಾಡೋ ರೈತನನ್ನು ಮದುವೆಯಾಗೋ ಹುಡುಗಿಯರಿಗೆ ವಿಶೇಷ ಭತ್ಯೆ, ಸ್ಥಾನಮಾನಕ್ಕೆ ಸಿಎಂ ಸಿದ್ಧರಾಮಯ್ಯ ಅವರಲ್ಲಿ ಶಾಸಕ ಹೆಚ್.ಡಿ ರಂಗನಾಥ್ ಮನವಿ ಮಾಡಿದ್ದಾರೆ.









