ಶಿವಮೊಗ್ಗ : ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂಬ ಘೋಷಣೆ ಆರೋಪಕ್ಕೆ ಸಂಬಂಧಿಸಿದಂತೆ ಶಿವಮೊಗ್ಗದ ಶಿಕಾರಿಪುರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಮಾತನಾಡಿದ್ದು,ಕಾಂಗ್ರೆಸ್ ಸರ್ಕಾರ ದೇಶದ್ರೋಹಿಗಳನ್ನು ರಕ್ಷಿಸುವ ‘ಆರನೇ ಗ್ಯಾರಂಟಿ’ ಘೋಷಿಸಿದೆ ಎಂದು ಕಿಡಿ ಕಾರಿದ್ದಾರೆ.
ಪಾಕ್ ಪರ ಘೋಷಣೆ ಆರೋಪ : ಬೆಂಗಳೂರು ‘KPCC’ ಕಚೇರಿಗೆ ನೂರಾರು ಪತ್ರ ಬರೆದ ಬಿಜೆಪಿ ಕಾರ್ಯಕರ್ತರು
ಶಿವಮೊಗ್ಗದ ಶಿಕಾರಿಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರಕ್ಕೆ ಮಾನ ಮರ್ಯಾದೆ ಇದ್ದರೆ ನಿನ್ನೆ ಬಂಧಿಸಬೇಕಿತ್ತು. ಘೋಷಣೆ ಕೂಗಿದ ಜಾಗದಲ್ಲೇ ಒದ್ದು ಆತನನ್ನು ಬಂಧಿಸಬೇಕಿತ್ತು ಎಂದು ಬಿವೈ ವಿಜಯೇಂದ್ರ ಕಿಡಿ ಕಾರಿದ್ದಾರೆ.
ಅರಣ್ಯ ವಿಜ್ಞಾನ ಪದವೀಧರರಿಂದ ಪ್ರತಿಭಟನೆ: ವಿಜಯಭಾಸ್ಕರ್ ಸಮಿತಿ ಶಿಫಾರಸು ಜಾರಿ ಇಲ್ಲ- ಸಚಿವ ಈಶ್ವರ ಖಂಡ್ರೆ ಭರವಸೆ
ದೇಶದ್ರೋಹಿಗಳನ್ನು ಬಂಧಿಸಲು ಯೋಚನೆ ಮಾಡಬೇಕಾ? ದೇಶದ್ರೋಹಿಗಳನ್ನು ರಕ್ಷಿಸುವ ಆರನೇ ಗ್ಯಾರಂಟಿ ಘೋಷಿಸಿದ್ದಾರೆ ಕಾಂಗ್ರೆಸ್ ಸರ್ಕಾರ ಬಂದ ಮೇಲೆ ದೇಶದ್ರೋಹಿಗಳಿಗೆ ಬೆಂಬಲ ನೀಡಲಾಗುತ್ತಿದೆ ಶಿಕಾರಿಪುರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ವಾಗ್ದಾಳಿ ನಡೆಸಿದರು.
‘ನಾಮಫಲಕ’ಗಳಲ್ಲಿ ಕಡ್ಡಾಯವಾಗಿ ‘ಕನ್ನಡ’ ಬಳಸಿ: ಇಲ್ಲದಿದ್ದರೆ ‘ಪರವಾನಿಗೆ ರದ್ದು’
ಬಿಎಸ್ ಯಡಿಯೂರಪ್ಪ ಆಕ್ರೋಶ
ಇನ್ನೂ ಇದ್ದೆ ವಿಷಯವಾಗಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಆಕ್ರೋಶ ವ್ಯಕ್ತಪಡಿಸಿದ್ದು, ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂಬ ಘೋಷಣೆ ಆರೋಪದ ಹಿನ್ನೆಲೆಯಲ್ಲಿ ಪಾಕ್ ಪರ ಘೋಷಣೆ ಕೂಗಿದ್ದು ಅಕ್ಷಮ್ಯ ಅಪರಾಧವಾಗಿದೆ. ಪ್ರಕರಣದ ಬಗ್ಗೆ ರಾಜ್ಯ ಸರ್ಕಾರ ಸೂಕ್ತವಾದಂತಹ ಕ್ರಮ ಕೈಗೊಳ್ಳಬೇಕು ಎಂದು ಶಿವಮೊಗ್ಗದಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದರು.