ರಾಯಚೂರು : ವಿಧಾನಸಭೆ ಚುನಾವಣೆ ಸಮೀಪದ ಬೆನ್ನಲ್ಲೇ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಈಗಾಗಲೇ ಜೆಡಿಎಸ್ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದೆ.
ಇದೀಗ ಕಾಂಗ್ರೆಸ್ ಕೂಡ ಅಭ್ಯರ್ಥಿಗಳ ಘೋಷಣೆ ಮಾಡಲು ಸಿದ್ದವಾಗಿದೆ. ಜನವರಿ 15 ರೊಳಗೆ ಕನಿಷ್ಠ 150 ಕ್ಷೇತ್ರಗಳ ಅಭ್ಯರ್ಥಿ ಹೆಸರು ಘೋಷಣೆ ಮಾಡಲು ತಿರ್ಮಾನಿಸಿದ್ದೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಹೇಳಿದ್ದಾರೆ.
ಇಂದು ನಡೆದ ಕಾಂಗ್ರೆಸ್ ಸಭೆಯಲ್ಲಿ ಮಾತನಾಡಿದ ಖಂಡ್ರೆ ರಾಜ್ಯದ ಹಲವು ಕಡೆ ಪ್ರಮುಖ ಸಭೆ ನಡೆಸುತ್ತಿದ್ದೇವೆ. ಭ್ರಷ್ಟ ಬಿಜೆಪಿ ಸರ್ಕಾರವನ್ನ ಕಿತ್ತೊಗೆಯುವ ಸಂಕಲ್ಪವನ್ನು ಕಾಂಗ್ರೆಸ್ ಕಾರ್ಯಕರ್ತರು ಮಾಡಿದ್ದಾರೆ ಜನವರಿ 15 ರೊಳಗೆ ಕನಿಷ್ಠ 150 ಕ್ಷೇತ್ರಗಳ ಅಭ್ಯರ್ಥಿ ಹೆಸರು ಘೋಷಣೆ ಮಾಡಲು ತೀರ್ಮಾನಿಸಿದ್ದೇವೆ ಎಂದರು. ಅರ್ಹ ಆಕಾಂಕ್ಷಿಗಳ ಸಂಖ್ಯೆ ದೊಡ್ಡದಿದೆ. ಪಕ್ಷ ಯಾರಿಗೆ ಟಿಕೆಟ್ ಕೊಟ್ಟರೂ, ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಲು ಒಪ್ಪಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಹೇಳಿದ್ದಾರೆ.
BIGG NEWS : ಮಂಡ್ಯದಲ್ಲಿ ರೈತರ ಪೆಂಡಾಲ್ ಕಿತ್ತು ಹಾಕಿದ್ದ ಪೊಲೀಸರಿಂದಲೇ ಟೆಂಟ್ ಮರು ನಿರ್ಮಾಣ