ಬೆಂಗಳೂರು : ಬೆಂಗಳೂರಲ್ಲಿ ಮತ್ತೊಂದು ಅಪಘಾತ ಸಂಭವಿಸಿದ್ದು, ನಿಂತಿದ್ದ ಲಾರಿಗೆ ಹಿಂಬದಿಯಿಂದ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಚಾಲಕ ಸೇರಿ ಹತ್ತಕ್ಕೂ ಹೆಚ್ಚು ಜನರಿಗೆ ಗಂಭೀರವಾದ ಗಾಯಗಳಾಗಿವೆ. ದೊಡ್ಡಬಳ್ಳಾಪುರ ತಾಲೂಕಿನ ನಾಯಕರಂಡಹಳ್ಳಿ ಬಳಿ ಈ ಒಂದು ಅಪಘಾತ ಸಂಭವಿಸಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ನಾಯಕರಂಡಹಳ್ಳಿಲ್ಲಿ ಲಾರಿಗೆ ಬಸ್ ಡಿಕ್ಕಿ ಆಗಿದ್ದರಿಂದ ಬಸ್ನಲ್ಲಿಯೇ ಜನರು ಸಿಲುಕಿದ್ದರು.. ಸತತ ಒಂದು ಗಂಟೆಗಳ ಕಾಲ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಪ್ರಯಾಣಿಕರನ್ನು ರಕ್ಷಣೆ ಮಾಡಿದ್ದಾರೆ. ಅಪಘಾತದ ಹಿನ್ನೆಲೆಯಲ್ಲಿ ಯಲಹಂಕ ಮತ್ತು ಹಿಂದೂಪುರ ದಾರಿಯಲ್ಲಿ ಫುಲ್ ಟ್ರಾಫಿಕ್ ಜಾಮ್ ಉಂಟಾಗಿದೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ