ಮೈಸೂರು : ರಾಜ್ಯದಲ್ಲಿ ಮತ್ತೊಂದು ಅನೀಲ ದುರಂತ ಸಂಭವಿಸಿದ್ದು, ಮೈಸೂರಿನಲ್ಲಿ ಈ ಒಂದು ಘಟನೆ ನಡೆದಿದೆ. ಈ ಒಂದು ದುರಂತದಲ್ಲಿ ಐವರು ಜನರು ಅಸ್ವಸ್ಥರಾಗಿದ್ದು, ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮೈಸೂರಿನ ಹಳೆ ಕೆಸರೆಯ ಗುಜರಿ ಗೋದಾಮಿನಲ್ಲಿ ಈ ಘಟನೆ ಸಂಭವಿಸಿದೆ. ಗುಜರಿ ಗೋದಾಮಿನಲ್ಲಿ ಕೆಲಸ ಮಾಡುತ್ತಿದ್ದ ಐವರು ಅಸ್ವಸ್ಥರಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಅಸ್ವಸ್ಥಗೊಂಡ ಐವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.