ಬೆಂಗಳೂರು: ನಗರದಲ್ಲಿ ವೋಟರ್ ಐಡಿ ಪರಿಷ್ಕರಣೆ ಅಕ್ರಮ ಸಂಬಂಧ ಚಿಲುಮೆ ಸಂಸ್ಥೆಯ ಮಾಲೀಕ ಸೇರಿದಂತೆ ಹಲವರನ್ನು ಪೊಲೀಸರು ಬಂಧಿಸಿದ್ದಾರೆ. ಈ ಬೆನ್ನಲ್ಲೇ ಇಂದು ಮತ್ತೋರ್ವ ಆರೋಪಿಯನ್ನು ಈ ಪ್ರಕರಣದಲ್ಲಿ ಬಂಧಿಸಲಾಗಿದೆ.
ಸರ್ ರೈತರ ಸಾಲಮನ್ನಾ ಮಾಡುವಿರಾ.? ಏಯ್ ನೆಕ್ಸ್ಟ್ ಪ್ರಶ್ನೆ ಕೇಳಪ್ಪ: ಸಿಎಂ ಬೊಮ್ಮಾಯಿ ಉತ್ತರ
ಇಂದು ಹಲಸೂರು ಗೇಟ್ ಠಾಣೆ ಪೊಲೀಸರಿಂದ ಬೆಂಗಳೂರು ಮತದಾರರ ಪಟ್ಟಿ ಪರಿಷ್ಕರಣೆ ಅಕ್ರಮ ಪ್ರಕರಣದಲ್ಲಿ ಶಿವಕುಮಾರ್ ಎಂಬಾತನನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿ ಶಿವಕುಮಾರ್ ಚಿಲುಮೆ ಸಂಸ್ಥೆಗೆ ಮಧ್ಯವರ್ತಿಯಾಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.
ರಾಜ್ಯದ ಎಲ್ಲಾ ಗ್ರಾಮ ಪಂಚಾಯ್ತಿಗಳಿಗೆ ಸಂವಿಧಾನದ ಪ್ರತಿ ಹಂಚಿಕೆ – ಸಿಎಂ ಬೊಮ್ಮಾಯಿ
ಬಿಬಿಎಂಪಿ ಅಧಿಕಾರಿಗಳ ಸಹಿ ಪಡೆದು, ಐಡಿಗಳನ್ನು ಚಿಲುಮೆ ಸಂಸ್ಥೆಗೆ ತಂದು ಕೊಡುತ್ತಿದ್ದನು ಎಂಬುದಾಗಿ ತಿಳಿದು ಬಂದಿದೆ. ಈ ಹಿನ್ನಲೆಯಲ್ಲಿ ಆರೋಪಿ ಶಿವಕುಮಾರ್ ಬಂಧಿಸಿರುವಂತ ಹಲಸೂರು ಗೇಟ್ ಠಾಣೆಯ ಪೊಲೀಸರು, ವಿಚಾರಣೆಯನ್ನು ನಡೆಸುತ್ತಿದ್ದಾರೆ.