Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರೈಲಿನಲ್ಲಿ ಖಾಲಿ ಸೀಟು ಹುಡುಕಲು ಟಿಟಿಇ ಬೆನ್ನ ಹಿಂದೆ ಅಲೆಯುವ ಅಗತ್ಯವಿಲ್ಲ! ಐಆರ್‌ಸಿಟಿಯ ಈ ಫೀಚರ್ ಮೂಲಕ ನೀವೇ ಪತ್ತೆಹಚ್ಚಿ!

ರಾಜ್ಯದಿಂದ ರಾಷ್ಟ್ರೀಯ ಗ್ರಿಡ್‌ಗೆ ₹423 ಕೋಟಿ ವಿದ್ಯುತ್ ಮಾರಾಟದ ಸಾಧನೆ: ಇಂಧನ ಸಚಿವ ಕೆ.ಜೆ.ಜಾರ್ಜ್

​ಬೇಸಿಗೆಯ ಬಿಸಿಲು ನಿಮ್ಮನ್ನು ಹೆಚ್ಚು ಕೋಪಿಷ್ಠರನ್ನಾಗಿಸುತ್ತಿದೆಯೇ? ತಾಪಮಾನ ಏರಿಕೆ ಮತ್ತು ಮಾನಸಿಕ ಒತ್ತಡದ ನಡುವಿನ ಸಂಬಂಧ ಇಲ್ಲಿದೆ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಜನಸಾಮಾನ್ಯರಿಗೆ ಮತ್ತೊಂದು ಬಿಗ್ ಶಾಕ್ : ಬಿಪಿ,ಶುಗರ್ ಸೇರಿ ದಿನಬಳಕೆ ಔಷಧಿಗಳ ಬೆಲೆ ಏರಿಕೆ | Medicines Price Hike
INDIA

ಜನಸಾಮಾನ್ಯರಿಗೆ ಮತ್ತೊಂದು ಬಿಗ್ ಶಾಕ್ : ಬಿಪಿ,ಶುಗರ್ ಸೇರಿ ದಿನಬಳಕೆ ಔಷಧಿಗಳ ಬೆಲೆ ಏರಿಕೆ | Medicines Price Hike

By kannadanewsnow57

ನವದೆಹಲಿ: ಸಾಮಾನ್ಯವಾಗಿ ದಿನನಿತ್ಯ ಬಳಸುವ ರಕ್ತದೊತ್ತಡ (ಬಿಪಿ), ಮಧುಮೇಹ (ಡಯಾಬಿಟಿಸ್), ಲಿವರ್ ಸಮಸ್ಯೆ, ಅಸಿಡಿಟಿ ಮತ್ತು ಮಕ್ಕಳ ಚಿಕಿತ್ಸೆಗೆ ಬಳಸುವ ಹಲವು ಅಲೋಪತಿ ಔಷಧಿಗಳ ಬೆಲೆಯಲ್ಲಿ ಶೇಕಡಾ 10 ರಷ್ಟು ಹೆಚ್ಚಳವಾಗಿದ್ದು, ರೋಗಿಗಳಿಗೆ ಆರ್ಥಿಕ ಹೊರೆ ಮತ್ತಷ್ಟು ಹೆಚ್ಚಾಗಿದೆ.

ಮೇ ತಿಂಗಳಿನಿಂದ ಜಾರಿಗೆ ಬರುವಂತೆ ಪ್ರಮುಖ ಫಾರ್ಮಾಸ್ಯುಟಿಕಲ್ ಕಂಪನಿಗಳು ಔಷಧಿಗಳ ಬೆಲೆಯನ್ನು ಪರಿಷ್ಕರಿಸಿವೆ. ಜೀವ ರಕ್ಷಕ ಔಷಧಿಗಳಷ್ಟೇ ಅಲ್ಲದೆ, ದೀರ್ಘಕಾಲದ ಕಾಯಿಲೆಗಳಿಂದ ಬಳಲುತ್ತಿರುವ ರೋಗಿಗಳು ನಿಯಮಿತವಾಗಿ ತೆಗೆದುಕೊಳ್ಳುವ ಮಾತ್ರೆಗಳ ಬೆಲೆಯೂ ಏರಿಕೆಯಾಗಿದೆ.

ಬೆಲೆ ಏರಿಕೆಗೆ ಕಾರಣವೇನು?

ಸ್ಥಳೀಯ ಕೆಮಿಸ್ಟ್ ಅಸೋಸಿಯೇಷನ್ಗಳ ಪ್ರಕಾರ, ಔಷಧಿಗಳ ಬೆಲೆಯಲ್ಲಿ ಶೇ. 5 ರಿಂದ ಶೇ. 10 ರಷ್ಟು ಹೆಚ್ಚಳ ಕಂಡುಬಂದಿದೆ. ಔಷಧ ವ್ಯಾಪಾರಿಗಳ ಸಂಘದ ಪದಾಧಿಕಾರಿಗಳ ಪ್ರಕಾರ, ಇದು ವಾರ್ಷಿಕವಾಗಿ ನಡೆಯುವ ಸಾಮಾನ್ಯ ಬೆಲೆ ಪರಿಷ್ಕರಣೆಯಾಗಿದೆ. ಔಷಧ ತಯಾರಿಕೆಗೆ ಬಳಸುವ ಕಚ್ಚಾ ವಸ್ತುಗಳ (Raw Materials) ವೆಚ್ಚ ಹೆಚ್ಚಾಗಿರುವುದು ಈ ಬೆಲೆ ಏರಿಕೆಗೆ ಪ್ರಮುಖ ಕಾರಣ ಎನ್ನಲಾಗಿದೆ.

ಯಾವೆಲ್ಲ ಔಷಧಿಗಳು ದುಬಾರಿ? (ಅಂದಾಜು ದರಗಳು):
ದೈನಂದಿನ ಚಿಕಿತ್ಸೆಯಲ್ಲಿ ಅತಿ ಹೆಚ್ಚು ಬಳಕೆಯಾಗುವ ಪ್ರಮುಖ ಔಷಧಿಗಳ ಬೆಲೆ ಹೀಗೆ ಬದಲಾಗಿದೆ:

ಲಿವ್ 52 ಸಿರಪ್ (Liv 52): ರೂ. 328 ರಿಂದ ರೂ. 351 ಕ್ಕೆ ಏರಿಕೆ.

ಡೈಜಿನ್ (Digene): ರೂ. 170 ರಿಂದ ರೂ. 180 ಕ್ಕೆ ಏರಿಕೆ.

ಗ್ಲಿಮ್ಸ್ಟಾರ್ ಮಾತ್ರೆ (Glimstar): ರೂ. 117 ರಿಂದ ರೂ. 129 ಕ್ಕೆ ಏರಿಕೆ.

ಆಮ್ಲೋಕೈಂಡ್ (Amlokind): ರೂ. 55 ರಿಂದ ರೂ. 61 ಕ್ಕೆ ಏರಿಕೆ.

ಎವಿಯಾನ್ ಕ್ಯಾಪ್ಸುಲ್ (Evion): ರೂ. 81 ರಿಂದ ರೂ. 89 ಕ್ಕೆ ಏರಿಕೆ.

ಬೆಟ್ನೋವೇಟ್ ಸ್ಕಿನ್ ಕ್ರೀಮ್ (Betnovate): ರೂ. 62 ರಿಂದ ರೂ. 68 ಕ್ಕೆ ಏರಿಕೆ.

ಜನರಿಕ್ ಔಷಧಿಗಳತ್ತ ಮುಖ ಮಾಡಿದ ಗ್ರಾಹಕರು:
ಔಷಧಿಗಳ ಬೆಲೆಯಲ್ಲಿ ದಿಢೀರ್ ಏರಿಕೆಯಾಗಿರುವುದರಿಂದ ಗ್ರಾಹಕರು ಫಾರ್ಮಸಿಸ್ಟ್ಗಳ ಬಳಿ ಪ್ರಶ್ನಿಸುತ್ತಿದ್ದಾರೆ. ಇದೇ ಕಾರಣಕ್ಕೆ ಸದ್ಯ ಮಾರುಕಟ್ಟೆಯಲ್ಲಿ ದುಬಾರಿ ಬ್ರಾಂಡೆಡ್ ಔಷಧಿಗಳ ಬದಲಾಗಿ, ಕಡಿಮೆ ವೆಚ್ಚದ ಪರ್ಯಾಯ ಬ್ರಾಂಡ್ಗಳು ಅಥವಾ ಜನರಿಕ್ (Generic) ಔಷಧಿಗಳನ್ನು ಖರೀದಿಸಲು ಜನರು ಹೆಚ್ಚು ಆಸಕ್ತಿ ತೋರಿಸುತ್ತಿದ್ದಾರೆ ಎಂದು ಔಷಧ ವ್ಯಾಪಾರಿಗಳು ತಿಳಿಸಿದ್ದಾರೆ.

ವಿಶೇಷವಾಗಿ ಜೀವನಶೈಲಿ ಕಾಯಿಲೆಗಳು ಮತ್ತು ದೀರ್ಘಕಾಲದ ಕಾಯಿಲೆಗಳಿಗೆ ನಿರಂತರವಾಗಿ ಔಷಧಿ ಸೇವಿಸುವ ಮಧ್ಯಮ ಮತ್ತು ಬಡ ವರ್ಗದ ರೋಗಿಗಳಿಗೆ ಈ ಬೆಲೆ ಏರಿಕೆ ದೊಡ್ಡ ಪೆಟ್ಟು ನೀಡಿದೆ.

Another big shock for the common man: Price hike of daily medicines including BP sugar | Medicines Price Hike
Share. Facebook Twitter LinkedIn WhatsApp Email

Related Posts

ರೈಲಿನಲ್ಲಿ ಖಾಲಿ ಸೀಟು ಹುಡುಕಲು ಟಿಟಿಇ ಬೆನ್ನ ಹಿಂದೆ ಅಲೆಯುವ ಅಗತ್ಯವಿಲ್ಲ! ಐಆರ್‌ಸಿಟಿಯ ಈ ಫೀಚರ್ ಮೂಲಕ ನೀವೇ ಪತ್ತೆಹಚ್ಚಿ!

2 Mins Read

​ಬೇಸಿಗೆಯ ಬಿಸಿಲು ನಿಮ್ಮನ್ನು ಹೆಚ್ಚು ಕೋಪಿಷ್ಠರನ್ನಾಗಿಸುತ್ತಿದೆಯೇ? ತಾಪಮಾನ ಏರಿಕೆ ಮತ್ತು ಮಾನಸಿಕ ಒತ್ತಡದ ನಡುವಿನ ಸಂಬಂಧ ಇಲ್ಲಿದೆ!

2 Mins Read

​ಏರ್ ಇಂಡಿಯಾ ವಿಮಾನ ದುರಂತ: ಸಂತ್ರಸ್ತ ಕುಟುಂಬಗಳ ಮೇಲೆ ಅಂತಿಮ ಪರಿಹಾರಕ್ಕಾಗಿ ಯಾವುದೇ ಒತ್ತಡವಿಲ್ಲ; ಏರ್ ಇಂಡಿಯಾ ಸ್ಪಷ್ಟನೆ

2 Mins Read
Recent News

ರೈಲಿನಲ್ಲಿ ಖಾಲಿ ಸೀಟು ಹುಡುಕಲು ಟಿಟಿಇ ಬೆನ್ನ ಹಿಂದೆ ಅಲೆಯುವ ಅಗತ್ಯವಿಲ್ಲ! ಐಆರ್‌ಸಿಟಿಯ ಈ ಫೀಚರ್ ಮೂಲಕ ನೀವೇ ಪತ್ತೆಹಚ್ಚಿ!

ರಾಜ್ಯದಿಂದ ರಾಷ್ಟ್ರೀಯ ಗ್ರಿಡ್‌ಗೆ ₹423 ಕೋಟಿ ವಿದ್ಯುತ್ ಮಾರಾಟದ ಸಾಧನೆ: ಇಂಧನ ಸಚಿವ ಕೆ.ಜೆ.ಜಾರ್ಜ್

​ಬೇಸಿಗೆಯ ಬಿಸಿಲು ನಿಮ್ಮನ್ನು ಹೆಚ್ಚು ಕೋಪಿಷ್ಠರನ್ನಾಗಿಸುತ್ತಿದೆಯೇ? ತಾಪಮಾನ ಏರಿಕೆ ಮತ್ತು ಮಾನಸಿಕ ಒತ್ತಡದ ನಡುವಿನ ಸಂಬಂಧ ಇಲ್ಲಿದೆ!

​ಏರ್ ಇಂಡಿಯಾ ವಿಮಾನ ದುರಂತ: ಸಂತ್ರಸ್ತ ಕುಟುಂಬಗಳ ಮೇಲೆ ಅಂತಿಮ ಪರಿಹಾರಕ್ಕಾಗಿ ಯಾವುದೇ ಒತ್ತಡವಿಲ್ಲ; ಏರ್ ಇಂಡಿಯಾ ಸ್ಪಷ್ಟನೆ

State News
KARNATAKA

ರಾಜ್ಯದಿಂದ ರಾಷ್ಟ್ರೀಯ ಗ್ರಿಡ್‌ಗೆ ₹423 ಕೋಟಿ ವಿದ್ಯುತ್ ಮಾರಾಟದ ಸಾಧನೆ: ಇಂಧನ ಸಚಿವ ಕೆ.ಜೆ.ಜಾರ್ಜ್

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ಪವರ್‌ ಕಂಪನಿ ಆಫ್‌ ಕರ್ನಾಟಕ ಲಿಮಿಟೆಡ್ ಮೂಲಕ ರಾಜ್ಯವು ಕಳೆದ ಎರಡೂವರೆ ತಿಂಗಳಲ್ಲಿ ಪ್ರತಿ ಯೂನಿಟ್‌ಗೆ 9.08 ರೂಪಾಯಿಯಂತೆ…

ಜನರ ಪ್ರೀತಿ, ವಿಶ್ವಾಸಕ್ಕೆ ಎಂದಿಗೂ ಚಿರಋಣಿ: ಮದ್ದೂರು ಶಾಸಕ ಕೆ.ಎಂ.ಉದಯ್

BIG NEWS: ಮೇಲುಕೋಟೆ ಯೋಗನರಸಿಂಹಸ್ವಾಮಿ ದೇವಸ್ಥಾನದ ಖಜಾನೆಗೆ ಕನ್ನ: ಅರ್ಚಕರು, ಸಿಬ್ಬಂದಿ ವಿರುದ್ಧ ದೂರು!

ಮಕ್ಕಳ ಪೋಷಕರ ಗಮನಕ್ಕೆ: ಜೂನ್.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ, ತಪ್ಪದೇ ಹಾಕಿಸಿ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.