ಬೆಂಗಳೂರು: ಈಗಾಗಲೇ ಅಗತ್ಯವಸ್ತುಗಳ ಬೆಲೆ ಸೇರಿದಂತೆ ವಿವಿಧ ದರಗಳ ಹೆಚ್ಚಳದಿಂದ ಜನತೆ ತತ್ತರಿಸಿ ಹೋಗಿದ್ದಾರೆ. ಈ ನಡುವೆ ಬೆಂಗಳೂರಿನ ಜನತೆಗೆ ಮತ್ತೊಂದು ಶಾಕ್ ಎನ್ನುವಂತೆ ಪ್ರತಿ ವರ್ಷ ನೀರಿನ ದರ ಹೆಚ್ಚಳ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಬೆಂಗಳೂರು ಜಲಮಂಡಳಿ ( Bangalore Water Board ) ಪ್ರಸ್ತಾವನೆ ಸಲ್ಲಿಸಿದೆ.
ಈ ಕುರಿತಂತೆ ಮಾಹಿತಿ ನೀಡಿರುವಂತ ಬೆಂಗಳೂರು ಜಲಮಂಡಳಿಯ ಚೀಫ್ ಇಂಜಿನಿಯರ್ ಸುರೇಶ್ ಎಂಬುವರು, 2014ರ ಅಕ್ಟೋಬರ್ 20ರಿಂದ ಕಾವೇರಿ ನೀರಿನ ದರ ಪರಿಷ್ಕರಣೆ ಮಾಡಿಲ್ಲ. ಇದರಿಂದಾಗಿ ಜಲಮಂಡಳಿ ನಷ್ಟವನ್ನು ಅನುಭವಿಸುತ್ತಿದೆ. ಹೀಗಾಗಿ ವರ್ಷಕ್ಕೊಮ್ಮೆ ನೀರಿನ ದರ ಪರಿಷ್ಕರಣೆ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಈ ಕುರಿತು ಉತ್ತರಕ್ಕಾಗಿ ಕಾಯುತ್ತಿದ್ದೇವೆ ಎಂದಿದ್ದಾರೆ.
BREAKING NEWS : ಎಎಪಿ ನಾಯಕ ‘ಸತ್ಯೇಂದ್ರ ಜೈನ್’ಗೆ ಬಿಗ್ ಶಾಕ್ ; ಜಾಮೀನು ಅರ್ಜಿ ಮತ್ತೆ ತಿರಸ್ಕೃತ
ಅಂದಹಾಗೇ ಬೆಂಗಳೂರು ಜಲಮಂಡಳಿ ನೀರಿನ ದರ ಪರಿಷ್ಕರಣೆಗೆ ನಷ್ಟದ ನೆಪವೊಡ್ಡಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಜಲಮಂಡಳಿಯ ಪ್ರಸ್ತಾವನೆಗೆ ರಾಜ್ಯ ಸರ್ಕಾರ ಒಪ್ಪಿಗೆ ಸೂಚಿಸಿದರೇ, ಇನ್ಮುಂದೆ ಬೆಂಗಳೂರಿನಲ್ಲಿ ಪ್ರತಿವರ್ಷ ನೀರಿನ ದರ ಪರಿಷ್ಕರಣೆ ಆಗಲಿದೆ. ಈ ಮೂಲಕ ಸಿಲಿಕಾನ್ ಸಿಟಿ ಜನತೆಗೆ ಮತ್ತೊಂದು ಬಿಗ್ ಶಾಕ್ ನೀಡಿದಂತೆ ಆಗಲಿದೆ. ಆ ಬಗ್ಗೆ ಸರ್ಕಾರ ಯಾವ ನಿಲುವು ತೋರುತ್ತದೆ ಎಂಬುದನ್ನು ಕಾದು ನೋಡಬೇಕಿದೆ.
‘ಮೈಸೂರು ಗುಂಬಜ್’ ಹೇಳಿಕೆ ವಿಚಾರಕ್ಕೆ ನಾನು ಬದ್ದ : ಸಂಸದ ಪ್ರತಾಪ್ ಸಿಂಹ |Prathap Simha