ವಿಜಯಪುರ : ರಾಜ್ಯದಲ್ಲಿ ಶೀಘ್ರದಲ್ಲೇ ಮತ್ತೊಂದು ಸಿಡಿ ಫ್ಯಾಕ್ಟರಿ ಓಪನ್ ಆಗಲಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶೀಘ್ರದಲ್ಲೇ ಮತ್ತೊಂದು ಸಿಡಿ ಫ್ಯಾಕ್ಟರಿ ಓಪನ್ ಆಗಲಿದೆ. ಪ್ರಜ್ವಲ್ ಅಶ್ಲೀಲ ವಿಡಿಯೋ ಬಹಿರಂಗವಾಗಿದ್ದರ ಹಿಂದೆ ಡಿಸಿಎಂ ಡಿಕೆ ಶಿವಕುಮಾರ್ ಕೈವಾಡವಿದೆ ಎಂದು ಆರೋಪಿಸಿದರು. ಸೋಮವಾರ ವಕೀಲ, ಬಿಜೆಪಿ ನಾಯಕ ದೇವೇರಾಜೇ ಗೌಡರು ಆರೋಪಿಸಿದಂತೆ ಪ್ರಕರಣದಲ್ಲಿ ಡಿಕೆಶಿ ಕೈವಾಡ ಇರುವುದು ಸ್ಪಷ್ಟ ಎಂದು ಹೇಳಿದರು.
ರಾಜ್ಯ ಸರ್ಕಾರ ರಚನೆ ಮಾಡಿರುವ ಎಸ್ಐಟಿ ಸಂಪೂರ್ಣವಾಗಿ ಡಿಕೆ ಶಿವಕುಮಾರ್ ವಶದಲ್ಲಿದೆ. ಅವರ ಆಣತಿಯಂತೆ ಕೆಲಸ ಮಾಡುತ್ತದೆ ಎಂದು ಯತ್ನಾಳ್ ಕಿಡಿಕಾರಿದ್ದಾರೆ.