ಚಿಕ್ಕಬಳ್ಳಾಪುರ : ಇತ್ತೀಚಿಗೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟದಲ್ಲಿ ಪೌರಾಯುಕ್ತೆಗೆ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅಶ್ಲೀಲ ನಿಂದಿಸಿದ್ದು ಅಲ್ಲದೆ ಬೆದರಿಕೆ ಹಾಕಿರುವ ಪ್ರಕರಣ ನಡೆದಿತ್ತು. ಇದೀಗ ಮತ್ತೊಬ್ಬ ಕಾಂಗ್ರೆಸ್ ಮುಖಂಡ ಶಿಕ್ಷಕರಿಗೆ ನಿಂದಿಸಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.
ಹೌದು ಶಿಕ್ಷಕ ಶುಭಾಶೇಕರ್ ಎಂಬವರಿಗೆ ಕಾಂಗ್ರೆಸ್ ಮುಖಂಡ ನಾಗೇಶ್ ರೆಡ್ಡಿ ಅಶ್ಲೀಲವಾಗಿ ನಿಲ್ಲಿಸಿದ್ದಾನೆ. ಮತದಾರರ ಪಟ್ಟಿ ಪರಿಷ್ಕರಣೆಯ ವೇಳೆ ಶಿಕ್ಷಕನಿಗೆ ಬೆದರಿಕೆ ಹಾಕಿದ್ದಾನೆ. ಒಂದು ಪಕ್ಷದ ಹಿಂಬಾಲಕನಾಗಿದ್ದೀಯ ಎಂದು ಶಿಕ್ಷಕನಿಗೆ ಆವಾಜ್ ಹಾಕಿದ್ದಾನೆ. ಅವಾಜ್ ಹಾಕಿದ್ದು ಅಲ್ಲದೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಕರ್ನಾಟಕ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿವಶಂಕರ್ ಹಿಂದಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.








