ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಜೋಡಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಲಿವಿಂಗ್ ಟುಗೆದರ್ ನಲ್ಲಿದ್ದ ಜೋಡಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬೆಂಗಳೂರಿನಲ್ಲಿ ಕೆಲಸ ಮಾಡಿಕೊಂಡು ಲಿವಿಂಗ್ ಟುಗೆದರ್ ನಲ್ಲಿದ್ದ ಜೋಡಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ಹೊರವಲಯದ ಬನ್ನೇರುಘಟ್ಟದ ಜನತಾ ಕಾಲೋನಿಯಲಿ ಈ ಘಟನೆ ನಡೆದಿದೆ. ಮೃತರನ್ನು ಪ್ರಭು (38) ಹಾಗೂ ಲಕ್ಷ್ಮಮ್ಮ (30) ಎಂದು ಗುರುತಿಸಲಾಗಿದೆ.
ಮನೆಯಿಂದ ಕೊಳತೆ ವಾಸನೆ ಬರುತ್ತಿರುವುದನ್ನು ಗಮನಿಸಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಬನ್ನೇರುಘಟ್ಟ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.