ರಾಯಚೂರು: ದಿನೇ ದಿನೇ ರಾಜ್ಯದಲ್ಲಿ ಬಿರು ಬಿಸಿಲಿನ ತಾಪ ಹೆಚ್ಚಾಗುತ್ತಿದೆ. ಜನ, ಜಾನುವಾರು ಬಸವಳಿದು ಹೋಗುತ್ತಿದ್ದಾರೆ. ಇಂದು ರಾಜ್ಯದಲ್ಲಿ ಬಿರು ಬಿಸಿಲಿನ ತಾಪಕ್ಕೆ ರೈತನೊಬ್ಬ ಕುಸಿದು ಬಿದ್ದು ಸಾವನ್ನಪ್ಪಿರೋ ಘಟನೆ ರಾಯಚೂರಲ್ಲಿ ನಡೆದಿದೆ.
ರಾಯಚೂರು ತಾಲೂಕಿನ ಜಾಲಿಬೆಂಚಿ ಗ್ರಾಮದ ಹನುಮಂತು(45) ಎಂಬ ರೈತ, ಹೊಲದಲ್ಲಿ ಕೆಲಸಕ್ಕೆಂದು ತೆರಳಿದ್ದರು. ಹೊಲದಿಂದ ಬಣವೆ ಕೆಲಸ ಮುಗಿಸಿಕೊಂಡು ಮನೆಗೆ ವಾಪಾಸ್ ಆದ ಬಳಿಕ, ನೀರು ಕುಡಿಯುತ್ತಿದ್ದಂತೆ ಕುಸಿದು ಬಿದ್ದು, ಸಾವನ್ನಪ್ಪಿದ್ದಾರೆ.
ರೈತ ಹನುಮಂತು ಬಿಸಿಲ ತಾಪಕ್ಕೆ ಬಸವಳಿದು ಕುಸಿದು ಬಿದ್ದು ಸಾವನ್ನಪ್ಪಿರೋದಾಗಿ ಹೇಳಲಾಗುತ್ತಿದೆ. ಈ ಹಠಾತ್ ರೈತ ಹನುಮಂತು ಸಾವಿನಿಂದಾಗಿ ಕುಟುಂಬಸ್ಥರು ಕಂಗಾಲಾಗಿದ್ದಾರೆ. ಅಲ್ಲದೇ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಈ ಸಂಬಂಧ ಯರಗೇರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Bank of Namibia Npci Upi: ‘ಡಿಜಿಟಲ್ ಪಾವತಿ’ ಒಪ್ಪಂದಕ್ಕೆ ಸಹಿ ಹಾಕಿದ ‘ಬ್ಯಾಂಕ್ ಆಫ್ ನಮೀಬಿಯಾ’
BREAKING: ಕರ್ನಾಟದ 6 ವಿಧಾನಪರಿಷತ್ ಸ್ಥಾನಗಳಿಗೆ ಚುನಾವಣೆ ಘೋಷಣೆ: ಜೂ.3ರಂದು ಮತದಾನ, ಜೂ.6ಕ್ಕೆ ಫಲಿತಾಂಶ ಪ್ರಕಟ