ಯಾದಗಿರಿ: ವಿಪರೀತ ಬಿಸಿಲಿಗೆ ವೃದ್ದೆಯೊಬ್ಬರು ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಕುರಕುಂದಿ ಗ್ರಾಮದ ಹೊರವಲಯದಲ್ಲಿ ನಡೆದಿದೆ.
ಮೃತ ವೃದ್ದೆಯನ್ನು ಹಣಮಂತಿ (60) ಅಂತ ತಿಳಿದು ಬಂದಿದೆ. ಹಣಮಂತಿ ಅವರು ಉದ್ಯೋಗ ಖಾತ್ರಿ ಕೂಲಿ ಕೆಲಸಕ್ಕೆ ಹೋಗಿದ್ದ ವೇಳೆಯಲ್ಲಿ ವಿಪರೀತ ಬಿಸಿಲಿನಿಂದ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಇನ್ನೂ ಕೆಲಸ ಮಾಡುತ್ತಿದ್ದ ಜಾಗದಲೇ ಅವರು ಸ್ಥಳದಲ್ಲದೇ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.ಇನ್ನೂ ಮೃತ ವೃದ್ಧೆಯ ಮೃತದೇಹ ಯಾದಗಿರಿ ಯಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಘಟನೆ ಸಂಬಂಧ ವಡಗೇರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.