ಕೋಲಾರ : ರಾಜ್ಯದಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿಯಾಗಿದ್ದು ಕೋಲಾರ ಜಿಲ್ಲೆಯಲ್ಲಿ ಕಾಡಾನೆ ದಾಳಿಯಿಂದಾಗಿ ರೈತರೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಪೋಲೇನಹಳ್ಳಿಯಲ್ಲಿ ಕಾಡಾನೆ ದಾಳಿಯಿಂದ ೪೫ ವರ್ಷದ ನಾರಾಯಣಸ್ವಾಮಿ ಸಾವನ್ನಪ್ಪಿದ್ದಾರೆ.
ನಾರಾಯಣಸ್ವಾಮಿ ತರಕಾರಿ ತರಲು ಬಂಗಾರಪೇಟೆಗೆ ಹೋಗುವಾಗ ಕಾಡಾನೆ ದಾಳಿ ನಡೆಸಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಾಮಸಮುದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.