ಗದಗ : ರಾಜ್ಯದಲ್ಲಿ ಡೆಂಗ್ಯೂ ಮಹಾಮಾರಿಗೆ ಮತ್ತೊಂದು ಬಲಿಯಾಗಿದ್ದು, ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ 14 ವರ್ಷದ ಬಾಲಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ.
ಗದಗ ನಗರದ ಉದಯೋನ್ಮುಖ ಕ್ರಿಕೆಟ್ ಆಟಗಾರ 14 ವರ್ಷದ ಚಂದ್ರಣ್ಣ ಮನಗುಂಡಿ ಡೆಂಗ್ಯೂ ಜ್ವರಕ್ಕೆ ಬಲಿಯಾಗಿದ್ದಾನೆ. ತೀವ್ರ ಜ್ವರದ ಹಿನ್ನೆಲೆಯಲ್ಲಿ ಚಂದ್ರಣ್ಣನನ್ನು ಗದಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಮೃತಪಟ್ಟಿದ್ದಾನೆ.
ಗದಗ ಕ್ರಿಕೆಟರ್ಸ್ ಕ್ಲಬ್ ಮತ್ತು ಜಾನೋ ಪಂತರ ಕ್ರಿಕೆಟ್ ಅಕಾಡೆಮಿಯಲ್ಲಿ ಚಂದ್ರಣ್ಣ ಕ್ರಿಕೆಟರ್ ಆಗಿದ್ದ. ಇತ್ತೀಚೆಗೆ ಹುಬ್ಬಳ್ಳಿ ಪ್ರೀಮಿಯರ್ ಲೀಗ್ ನಲ್ಲಿ 14 ವರ್ಷದೊಳಗಿನ ವಿಭಾಗಕ್ಕೆ ಆಯ್ಕೆಯಾಗಿದ್ದರು.