ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಸಿನಿಮಾ ಸಾಹಸ ದೃಶ್ಯಗಳು ಮಾಡಲು ಹೋಗಿ ಅವಾಂತರ ಹೆಚ್ಚಾಗುತ್ತಿದೆ. ಇದೀಗ ಚಿತ್ರರಂಗದಲ್ಲಿ ಮತ್ತೊಂದು ಅವಘಡ ಸಂಭವಿಸಿದೆ.
BIGG NEWS: ರೌಡಿಗಳ ಸೇರ್ಪಡೆ ವಿಚಾರ ಬಿಜೆಪಿ ಪಕ್ಷಕ್ಕೆ ಶೋಭೆ ತರುವುದಿಲ್ಲ; ಪ್ರಮೋದ್ ಮುತಾಲಿಕ್ ಕಿಡಿ
ತಮಿಳು ಸಿನಿಮಾವೊಂದರ ಶೂಟಿಂಗ್ ಸಮಯದಲ್ಲಿ ಹಿರಿಯ ಸಾಹಸ ನಿರ್ದೇಶಕರೊಬ್ಬರು ನಿಧನರಾಗಿದ್ದಾರೆ. ಕ್ರೇನ್ ವೈಫಲ್ಯದಿಂದಾಗಿ ಈ ಘಟನೆ ಸಂಭವಿಸಿದೆ.20 ಅಡಿ ಮೇಲಿಂದ ಬಿದ್ದ ಪರಿಣಾಮ ಸ್ಟಂಟ್ ಮಾಸ್ಟರ್ ಸಾವು ಸಂಭವಿಸಿದೆ. ಕಳೆದ ಹಲವಾರು ವರ್ಷಗಳಿಂದ ತಮಿಳು ಚಿತ್ರರಂಗದಲ್ಲಿ ಸಾಹಸ ನಿರ್ದೇಶಕರಾಗಿದ್ದ ಸುರೇಶ್ ಮೃತ ದುರ್ದೈವಿ.
BIGG NEWS: ರೌಡಿಗಳ ಸೇರ್ಪಡೆ ವಿಚಾರ ಬಿಜೆಪಿ ಪಕ್ಷಕ್ಕೆ ಶೋಭೆ ತರುವುದಿಲ್ಲ; ಪ್ರಮೋದ್ ಮುತಾಲಿಕ್ ಕಿಡಿ
ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಅನೇಕರು ಪ್ರಾರ್ಥಿಸುತ್ತಿದ್ದಾರೆ. ಸುರೇಶ್ ಅವರಿಗೆ 54 ವರ್ಷ ವಯಸ್ಸಾಗಿತ್ತು. ಪತ್ನಿ ಮತ್ತು ಮಕ್ಕಳನ್ನು ಅವರು ಅಗಲಿದ್ದಾರೆ.ಶನಿವಾರ ಮುಂಜಾನೆ 10 ಗಂಟೆ ಸುಮಾರಿಗೆ ಈ ಅವಘಡ ಸಂಭವಿಸಿತು. ಖ್ಯಾತ ನಿರ್ದೇಶಕ ವೆಟ್ರಿಮಾರನ್ ಅವರು ‘ವಿದುತಲೈ’ ಸಿನಿಮಾಗೆ ಆ್ಯಕ್ಷನ್-ಕಟ್ ಹೇಳುತ್ತಿದ್ದಾರೆ.