ಹಾಸನ: ವಿಧಾನಪರಿಷತ್ ಸದಸ್ಯ ಡಾ.ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಈಗಾಗಲೇ ಎಫ್ಐಆರ್ ದಾಖಲಾಗಿದೆ. ಈ ಪ್ರಕರಣದಲ್ಲಿ ಜೈಲುಪಾಲಾಗಿದ್ದಾರೆ. ಈ ಬೆನ್ನಲ್ಲೇ ಡಾ.ಸೂರಜ್ ರೇವಣ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲಾಗಿದೆ.

ಇಂದು ಹಾಸನ ಜಿಲ್ಲೆಯ ಹೊಳೇನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಡಾ.ಸೂರಜ್ ರೇವಣ್ಣ ವಿರುದ್ಧ 3 ವರ್ಷಗಳ ಹಿಂದೆ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬುದಾಗಿ ಹೊಳೆನರಸೀಪುರ ಮೂಲದ ಯುವಕನೊಬ್ಬ ನೀಡಿದಂತ ದೂರಿನ ಹಿನ್ನಲೆಯಲ್ಲಿ ಮತ್ತೊಂದು ಎಫ್ಐಆರ್ ದಾಖಲಾಗಿದೆ.

ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 377, 342, 506ರ ಅಡಿಯಲ್ಲಿ ಎಫ್ಐಆರ್ ದಾಖಲಾಗಿದೆ. ಹೀಗಾಗಿ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣಗೆ ಮತ್ತೊಂದು ಸಂಕಷ್ಟ ಎದುರಾದಂತೆ ಆಗಿದೆ.

BREAKING: ದೆಹಲಿ CM ಅರವಿಂದ್ ಕೇಜ್ರಿವಾಲ್‌ಗೆ ಜೈಲೇಗತಿ, ಜಾಮೀನು ಆದೇಶಕ್ಕೆ ದೆಹಲಿ ಹೈಕೋರ್ಟ್‌ ತಡೆ

BREAKING: ದೆಹಲಿ CM ಅರವಿಂದ್ ಕೇಜ್ರಿವಾಲ್‌ಗೆ ಜೈಲೇಗತಿ, ಜಾಮೀನು ಆದೇಶಕ್ಕೆ ದೆಹಲಿ ಹೈಕೋರ್ಟ್‌ ತಡೆ

Share.
Exit mobile version