ಬೆಂಗಳೂರು : ಬೆಂಗಳೂರಲ್ಲಿ ಮತ್ತೊಂದು ಭೀಕರವಾದ ಅಗ್ನಿ ಅವಘಡ ಸಂಭವಿಸಿದ್ದು ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಲಕ್ಷಾಂತರ ಮೌಲ್ಯದ ಕೇಬಲ್ಗಳು ಸುಟ್ಟು ಬೂದಿಯಾಗಿದೆ.
ಬಾಶೆಟ್ಟಿಹಳ್ಳಿಯ ಬ್ಯಾಂಕ್ ಸರ್ಕಲ್ ಬಳಿಯ ರೈಲ್ವೆ ಮೇಲ್ಸೇತುವೆ ಬಳಿ ಘಟನೆ ನಡೆದಿದೆ. ಅಡ್ವಾನ್ಸ್ ಟೆಕ್ನಾಲಜೀಸ್ ಯುನಿಟ್ 2 ಕಂಪನಿಯಲ್ಲಿ ಘಟನೆ ನಡೆದಿದ್ದು, ಮೊದಲಿಗೆ ಕಂಪನಿಯಲ್ಲಿರುವ ಮರದ ತುಂಡುಗಳಿಗೆ ಹೊತ್ತಿಕೊಂಡ ಬೆಂಕಿ ಇಡೀ ಕಂಪನಿಗೆ ಆವರಿಸಿದೆ. ನಂತರ ಕೇಬಲ್ಗಳಿಗೂ ವ್ಯಾಪಿಸಿದ್ದು, ಲಕ್ಷಾಂತರ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿದೆ ಎಂದು ತಿಳಿದು ಬಂದಿದೆ. ತಕ್ಷಣವೇ ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ದಳ ಬೆಂಕಿ ನಂದಿಸಿದೆ.








