ಬೆಂಗಳೂರು : ಬೆಂಗಳೂರಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ಬೆಂಗಳೂರಿನ ನಂದಿನಿ ಲೇಔಟ್ ನಲ್ಲಿ ಮಧ್ಯರಾತ್ರಿ ರಾಜಕುಮಾರ್ ಸಮಾಧಿ ಬಳಿ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಬ್ಯಾನರ್ ಫ್ಲೆಕ್ಸ್ ಶೇಖರಿಸಿ ಇಟ್ಟಿದ್ದ ಬೆಂಕಿ ಅವಘಡ ಸಂಭವಿಸಿದೆ. ಅಲ್ಲದೇ ಪಕ್ಕದಲ್ಲಿದ್ದ ಪಿಜಿಗು ಬೆಂಕಿ ತಗುಲಿದ್ದು, ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಘಟನ ಸ್ಥಳಕ್ಕೆ ಅಗ್ನಿಶಾಮಕದಳ ಸಿಬ್ಬಂದಿ ಬಂದು ಬೆಂಕಿ ನಂದಿಸಿದ್ದಾರೆ. ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








