ಬೆಂಗಳೂರು: ನಗರದಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದೆ. ಚಾಲಹಳ್ಳಿ ಕ್ರಾಸ್ ಸಮೀಪದ ಅಯ್ಯಪ್ಪಸ್ವಾಮಿ ದೇವಸ್ಥಾನದ ಬಳಿಯಲ್ಲಿನ ಕಟ್ಟಡವೊಂದು ಬೆಂಕಿಯ ಕೆನ್ನಾಲಿಗೆಗೆ ಧಗಧಗಿಸಿ ಹೊತ್ತಿ ಉರಿಯುತ್ತಿದೆ.
ಬೆಂಗಳೂರಿನಲ್ಲಿ ದಿನೇ ದಿನೇ ಅಗ್ನಿ ಅವಘಡಗಳು ಹೆಚ್ಚಾಗುತ್ತಿದೆ. ಎಷ್ಟೇ ಸುರಕ್ಷತಾ ಕ್ರಮ ಕೈಗೊಂಡರೂ ಬೆಂಕಿ ಅವಘಡಗಳು ಮಾತ್ರ ಕಂಟ್ರೋಲ್ ಆಗಿಲ್ಲ. ಇಂದು ಜಾಲಹಳ್ಳಿ ಕ್ರಾಸ್ ಸಮೀಪದ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಬಳಿಯ ಉಮಾ ಶಂಕರ ಕಾಂಪ್ಲೆಕ್ಸ್ ನಲ್ಲಿ ಬೆಂಕಿ ಅವಘಡ ಉಂಟಾಗಿದೆ.
ಉಮಾ ಶಂಕರ ಕಾಂಪ್ಲೆಕ್ಸ್ ಕಟ್ಟಡದ ನೆಲ ಮಹಡಿಯಲ್ಲಿರುವಂತ ಎಲೆಕ್ಟ್ರಿಕ್ ಶಾಪ್ ನಲ್ಲಿ ಕಾಣಿಸಿಕೊಂಡಂತ ಬೆಂಕಿ, ಇಡೀ ಕಟ್ಟಡಕ್ಕೆ ಆವರಿಸಿದೆ. ಸಂಪೂರ್ಣ ಹೊಗೆಯಿಂದ ಕಟ್ಟಡ ಆವೃತಗೊಂಡಿದ್ದೂ, ಹಲವರು ಕಟ್ಟಡದಲ್ಲಿ ಸಿಲುಕಿರೋ ಶಂಕೆ ವ್ಯಕ್ತವಾಗಿದೆ.
ಈ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದಂತ ಎರಡು ಅಗ್ನಿಶಾಮಕ ವಾಹನಗಳ ಸಿಬ್ಬಂದಿಗಳು ಬೆಂಕಿ ನಂದಿಸೋ ಕಾರ್ಯದಲ್ಲಿ ತೊಡಗಿದ್ದಾರೆ. ಕಟ್ಟಡದ ಮೇಲೆ ರಕ್ಷಣೆಗಾಗಿ ಜನರು ಕೂಗಾಡುತ್ತಿರೋದಾಗಿ ಹೇಳಲಾಗುತ್ತಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ವರದಿ: ಶಶಿ ಬಿ ಈಶ್ವರಗೆರೆ, ಬೆಂಗಳೂರು
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ : ಕಾಂಗ್ರೆಸ್ ಸರ್ಕಾರ ಲೂಟಿಯಲ್ಲಿ ತೊಡಗಿದೆ : ಪ್ರಧಾನಿ ಮೋದಿ ವಾಗ್ದಾಳಿ
ಲೋಕಸಭಾ ಚುನಾವಣೆ : ಮಣಿಪುರ ಗಲಭೆಯ ಸಂತ್ರಸ್ತರಿಗೆ ನಿರಾಶ್ರಿತ ಕೇಂದ್ರದಿಂದಲೇ ಮತದಾನಕ್ಕೆ ಅವಕಾಶ!