ಬೆಂಗಳೂರು: ನಗರದಲ್ಲಿ ಮತ್ತೊಂದು ಭೀಕರ ಅಗ್ನಿ ಅವಘಡ ಸಂಭವಿಸಿದೆ. ಟೈರ್ ಅಂಗಡಿಯೊಂದರಲ್ಲಿ ಕಾಣಿಸಿಕೊಂಡ ಬೆಂಕಿಯಿಂದಾಗಿ ಧಗಧಗಿಸಿ ಹೊತ್ತಿ ಉರಿಯುತ್ತಿದೆ. ಬೆಂಕಿಯನ್ನು ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.
ಬೆಂಗಳೂರಿನ ಜೆಸಿ ರಸ್ತೆಯಲ್ಲಿನ ವೆಂಕಟೇಶ್ವರ ಟೈರ್ ಅಂಗಡಿಯಲ್ಲಿ ಭೀಕರ ಬೆಂಕಿ ಕಾಣಿಸಿಕೊಂಡಿದೆ. ಅಂಗಡಿಯನ್ನು ಬಾಗಿಲು ಹಾಕಿ ಹೋಗಿದ್ದಾಗ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗುತ್ತಿದೆ.
ಬೆಂಕಿಯ ಕೆನ್ನಾಲಿಗೆಯಿಂದಾಗಿ ಟೈರ್ ಅಂಗಡಿ ಧಗಧಗಿಸಿ ಹೊತ್ತಿ ಉರಿಯುತ್ತಿದೆ. ಅಂಗಡಿಯ ಮುಂದಿದ್ದಂತ ಎರಡು ವಾಹನಗಳು ಕೂಡ ಸುಟ್ಟು ಭಸ್ಮವಾಗಿದ್ದಾರೆ. ಬೆಂಕಿಯನ್ನು ನಂದಿಸಲು ಎರಡು ಅಗ್ನಿಶಾಮಕ ವಾಹನಗಳು ಸ್ಥಳದಲ್ಲಿ ಹರಸಾಹಸ ಪಡುತ್ತಿದ್ದಾರೆ. ಇನ್ನೂ ಬೆಂಕಿ ನಿಯಂತ್ರಣಕ್ಕೆ ಬಂದಿಲ್ಲ ಎನ್ನಲಾಗುತ್ತಿದೆ.
‘ಭಾಗ್ಯಲಕ್ಷ್ಮೀ ಯೋಜನೆ’ ಫಲಾನುಭವಿಗಳಿಗೆ ಸಿಹಿಸುದ್ದಿ: 18 ವರ್ಷ ತುಂಬಿದವರಿಗೆ ಹಣ ಮಂಜೂರು | Bhagya Lakshmi Scheme