BREAKING: ಬೆಂಗಳೂರಲ್ಲಿ ಮತ್ತೊಂದು ಅಗ್ನಿ ಅವಘಡ: ಹೊತ್ತಿ ಉರಿಯುತ್ತಿರುವ ಟೈರ್ ಅಂಗಡಿ, ಬೆಂಕಿ ನಂದಿಸಲು ಹರಸಾಹಸ

ಬೆಂಗಳೂರು: ನಗರದಲ್ಲಿ ಮತ್ತೊಂದು ಭೀಕರ ಅಗ್ನಿ ಅವಘಡ ಸಂಭವಿಸಿದೆ. ಟೈರ್ ಅಂಗಡಿಯೊಂದರಲ್ಲಿ ಕಾಣಿಸಿಕೊಂಡ ಬೆಂಕಿಯಿಂದಾಗಿ ಧಗಧಗಿಸಿ ಹೊತ್ತಿ ಉರಿಯುತ್ತಿದೆ. ಬೆಂಕಿಯನ್ನು ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. ಬೆಂಗಳೂರಿನ ಜೆಸಿ ರಸ್ತೆಯಲ್ಲಿನ ವೆಂಕಟೇಶ್ವರ ಟೈರ್ ಅಂಗಡಿಯಲ್ಲಿ ಭೀಕರ ಬೆಂಕಿ ಕಾಣಿಸಿಕೊಂಡಿದೆ. ಅಂಗಡಿಯನ್ನು ಬಾಗಿಲು ಹಾಕಿ ಹೋಗಿದ್ದಾಗ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗುತ್ತಿದೆ. ಬೆಂಕಿಯ ಕೆನ್ನಾಲಿಗೆಯಿಂದಾಗಿ ಟೈರ್ ಅಂಗಡಿ ಧಗಧಗಿಸಿ ಹೊತ್ತಿ ಉರಿಯುತ್ತಿದೆ. ಅಂಗಡಿಯ ಮುಂದಿದ್ದಂತ ಎರಡು ವಾಹನಗಳು ಕೂಡ ಸುಟ್ಟು ಭಸ್ಮವಾಗಿದ್ದಾರೆ. ಬೆಂಕಿಯನ್ನು ನಂದಿಸಲು … Continue reading BREAKING: ಬೆಂಗಳೂರಲ್ಲಿ ಮತ್ತೊಂದು ಅಗ್ನಿ ಅವಘಡ: ಹೊತ್ತಿ ಉರಿಯುತ್ತಿರುವ ಟೈರ್ ಅಂಗಡಿ, ಬೆಂಕಿ ನಂದಿಸಲು ಹರಸಾಹಸ