ಬೆಂಗಳೂರು : ಮಾನ್ಯ ಸರ್ವೋಚ್ಚ ನ್ಯಾಯಾಲಯವು ವಿಶೇಷ ಲೋಕ್ ಅದಾಲತ್‍ನ್ನು ಜುಲೈ, 29 ರಿಂದ ಆಗಸ್ಟ್, 03 ರವರೆಗೆ ನಡೆಸಲು ಉದ್ದೇಶಿಸಿದ್ದು, ಈ ಹಿನ್ನೆಲೆಯಲ್ಲಿ ಪಕ್ಷಕಾರರುಗಳಿಗೆ, ಎದುರುದಾರರ ಜೊತೆ ಪೂರ್ವಭಾವಿ ಲೋಕ್ ಅದಾಲತ್‍ನ್ನು ನಡೆಸಲು ವಿಡಿಯೋ ಕಾನ್ಫರೆನ್ಸ್ ವ್ಯವಸ್ಥೆ ಮಾಡಲಾಗಿರುತ್ತದೆ.
ಎಲ್ಲಾ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಗಳಲ್ಲಿ ಹಾಗೂ ತಾಲ್ಲೂಕು ಕಾನೂನು ಸೇವಾ ಸಮಿತಿಗಳಲ್ಲಿ ವಿಡಿಯೋ ಕಾನ್ಫರೆನ್ಸ್ ಕೇಂದ್ರಗಳನ್ನು ಸ್ಥಾಪಿಸಲು ತೀರ್ಮಾನಿಸಲಾಗಿದೆ. ಎಲ್ಲಾ ಪಕ್ಷಕಾರರು ವಿಡಿಯೋ ಕಾನ್ಫರೆನ್ಸ್ ಮೂಲಕ ಮಾನ್ಯ ಸರ್ವೋಚ್ಚ ನ್ಯಾಯಾಲಯವು ನಡೆಸುವ ಪೂರ್ವಭಾವಿ ಲೋಕ್ ಅದಾಲತ್‍ನಲ್ಲಿ ಭಾಗವಹಿಸಲು ಅನುಕೂಲ ಮಾಡಲಾಗಿರುತ್ತದೆ.
ಈ ವಿಶೇಷ ಲೋಕ್ ಅದಾಲತ್‍ನಲ್ಲಿ ರಾಜೀ ಸಂಧಾನಕ್ಕೆ ಗುರುತಿಸಲಾದ ಪ್ರಕರಣಗಳ ಪಟ್ಟಿಯನ್ನು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ವೆಬ್‍ಸೈಟ್‍ನಲ್ಲಿ ವರದಿಯಾಗಿರುತ್ತದೆ. ಇದರಿಂದ ಈ ಪ್ರಕರಣಗಳಲ್ಲಿನ ಎಲ್ಲಾ ಪಕ್ಷಕಾರರುಗಳು ತಮ್ಮ ವಾಸಸ್ಥಳಗಳ ವ್ಯಾಪ್ತಿಯಲ್ಲಿ ಬರುವ ತಾಲ್ಲೂಕು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಗಳಲ್ಲಿ ತೆರೆಯಲಾಗಿರುವ ವಿಡಿಯೋ ಕಾನ್ಫರೆನ್ಸ್ ಕೇಂದ್ರಗಳಿಗೆ ಭೇಟಿ ಕೊಟ್ಟು ಜುಲೈ, 29 ರಿಂದ ಆಗಸ್ಟ್, 03 ರವರೆಗೆ ನಡೆಯುವ ವಿಶೇಷ ಲೋಕ್ ಅದಾಲತ್‍ನಲ್ಲಿ ತಮ್ಮ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಕೋರಿದೆ.
ಹೆಚ್ಚಿನ ಮಾಹಿತಿಗೆ ವೆಬ್‍ಸೈಟ್ www.kslsa.kar.nic.in ಅನ್ನು ಸಂಪರ್ಕಿಸಬಹುದು ಹಾಗೂ ಆಯಾಯ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಮತ್ತು ತಾಲ್ಲೂಕು ಕಾನೂನು ಸೇವಾ ಸಮಿತಿಗಳ ಸದಸ್ಯ ಕಾರ್ಯದರ್ಶಿಯವರನ್ನು ಸಂಪರ್ಕಿಸಬಹುದು ಮತ್ತು ಕ್ಯೂಆರ್‍ಕೋಡ್‍ನಲ್ಲಿ ಟೆಲಿಗ್ರಾಂ ಚಾನಲ್‍ಗೆ ಚಂದಾದಾರರಾಗಿ ಎನ್‍ಎಎಲ್‍ಎಸ್‍ಎ ಸಹಾಯವಾಣಿ ಸಂಖ್ಯೆ 15100 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ಎಲ್.ರಘುನಾಥ್ ಅವರು ತಿಳಿಸಿದ್ದಾರೆ.