ಬೆಂಗಳೂರು: ರಾಜ್ಯ ಸರ್ಕಾರದಿಂದ ಈಗಾಗಲೇ ಮಹಿಳೆಯರಿಗಾಗಿ ಗೃಹಲಕ್ಷ್ಮಿ, ಶಕ್ತಿ ಯೋಜನೆ ಜಾರಿಗೊಳಿಸಿದ ನಂತ್ರ, ಮತ್ತೊಂದು ಗುಡ್ ನ್ಯೂಸ್ ನೀಡಲಾಗಿದೆ. ಅದೇ ರಾಮನಗರ ಬಿಡದಿಯ ಬಳಿಯಲ್ಲಿ ಮಹಿಳೆಯರಿಗಾಗಿಯೇ ವಾಹನ ಚಾಲನೆ ತರಬೇತಿ ನೀಡೋದಕ್ಕಾಗಿ ಪ್ರಾದೇಶಿಕ ವಾಹನ ಚಾಲನಾ ತರಬೇತಿ ಕೇಂದ್ರವನ್ನು ಸ್ಥಾಪಿಸೋದಾಗಿದೆ.
ಈ ಕುರಿತಂತೆ ನಿನ್ನೆ ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದಂತ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಅನುಮೋದಿಸಿ, ಅನುದಾವನಕ್ಕೂ ಒಪ್ಪಿಗೆ ಸೂಚಿಸಲಾಗಿದೆ. ಹೀಗಾಗಿ ರಾಮನಗರ ತಾಲ್ಲೂಕು ಬಿಡದಿಯಲ್ಲಿ ಮಹಿಳೆಯರಿಗಾಗಿ ಪ್ರಾದೇಶಿಕ ವಾಹನ ಚಾಲನಾ ತರಬೇತಿ ಕೇಂದ್ರವನ್ನು ಸ್ಥಾಪಿಸಲಾಗುತ್ತಿದೆ.
ಅಂದಹಾಗೇ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಅವರ ಮಾರ್ಗದರ್ಶನದಲ್ಲಿ ಸಾರಿಗೆ ಇಲಾಖೆ ಈ ಮಹತ್ವಾಕಾಂಕ್ಷಿ ಯೋಜನೆಯ ಪ್ರಸ್ತಾಪವನ್ನು ಮುಂದಿಟ್ಟಿದೆ. ಈ ಯೋಜನೆಗೆ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಅನುಮೋದಿಸಲಾಗಿದೆ.
AWAKE ಸಂಸ್ಥೆ, ರಾಜಾಜಿನಗರ, ಬೆಂಗಳೂರು ಮತ್ತು ಸಾರಿಗೆ ಇಲಾಖೆಯ ಜಂಟಿ ಸಹಭಾಗಿತ್ವದಲ್ಲಿ ರೂ.10.50 ಕೋಟಿಗಳ ಅಂದಾಜು ಮೊತ್ತದಲ್ಲಿ ಬಿಡದಿಯಲ್ಲಿ ಪ್ರಾದೇಶಿಕ ವಾಹನ ಚಾಲನಾ ತರಬೇತಿ ಕೇಂದ್ರ ಸ್ಥಾಪನೆಗೆ ಯೋಜಿಸಲಾಗಿದೆ. ಈ ಮೂಲಕ ಶಕ್ತಿ, ಗೃಹಲಕ್ಷ್ಮೀ ಯೋಜನೆಯ ಬಳಿಕ ರಾಜ್ಯ ಸರ್ಕಾರದಿಂದ ಮಹಿಳೆಯರಿಗೆ ವಾಹನ ಚಾಲನಾ ತರಬೇತಿಯಂತ ಮತ್ತೊಂದು ಗುಡ್ ನ್ಯೂಸ್ ನೀಡಲಾಗಿದೆ.
‘IPS’ ಹುದ್ದೆಗೆ ‘ಪ್ರತಾಪ್ ರೆಡ್ಡಿ’ ರಾಜೀನಾಮೆ: ನಿವೃತ್ತಿಗೆ 2 ತಿಂಗಳು ಬಾಕಿ ಇರುವಾಗಲೇ ‘ಗುಡ್ ಬೈ’
“ನಿಮಗೊಂದು ಶಿಕ್ಷೆ ನೀಡ್ತೀನಿ” : ಕ್ಯಾಂಟೀನ್’ನಲ್ಲಿ ವಿವಿಧ ಪಕ್ಷಗಳ ‘8 ಸಂಸದ’ರೊಂದಿಗೆ ‘ಪ್ರಧಾನಿ ಮೋದಿ’ ಭೋಜನಕೂಟ