ಬೆಂಗಳೂರು : ರಾಜ್ಯ ಸರ್ಕಾರವು ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ನ್ನಭಾಗ್ಯ ಯೋಜನೆಯಡಿ, ಈ ತಿಂಗಳಿಂದ ಪ್ರತಿ ಫಲಾನುಭವಿಗೆ 10 ಕೆಜಿ ಅಕ್ಕಿಯನ್ನು ನೀಡುವುದರೊಂದಿಗೆ, ಫೆಬ್ರವರಿ ತಿಂಗಳ 5 ಕೆಜಿ ಅಕ್ಕಿಯನ್ನು ಸೇರಿಸಿ ಒಟ್ಟು 15 ಕೆಜಿ ಅಕ್ಕಿಯನ್ನು ವಿತರಿಸಲು ತೀರ್ಮಾನಿಸಲಾಗಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದ್ದಾರೆ.
ವಿಧಾನ ಸೌಧದಲ್ಲಿ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು, ಆಹಾರ ಇಲಾಖೆಯ ಉಪ ನಿರ್ದೇಶಕರು, ಜಿಲ್ಲಾ ವ್ಯವಸ್ಥಾಪಕ ನಿರ್ದೇಶಕರು ಮತ್ತು ಖರೀದಿ ಏಜೆನ್ಸಿ ಮುಖ್ಯಸ್ಥರೊಂದಿಗೆ ವಿಡಿಯೋ ಸಂವಾದದ ಮೂಲಕ ಸಭೆಯನ್ನು ನಡೆಸಿ ಮಾತನಾಡಿದ ಅವರು,ಅನ್ನಭಾಗ್ಯ ಯೋಜನೆಯಡಿ, ಈ ತಿಂಗಳಿಂದ ಪ್ರತಿ ಫಲಾನುಭವಿಗೆ 10 ಕೆಜಿ ಅಕ್ಕಿಯನ್ನು ನೀಡುವುದರೊಂದಿಗೆ, ಫೆಬ್ರವರಿ ತಿಂಗಳ 5 ಕೆಜಿ ಅಕ್ಕಿಯನ್ನು ಸೇರಿಸಿ ಒಟ್ಟು 15 ಕೆಜಿ ಅಕ್ಕಿಯನ್ನು ವಿತರಿಸಲು ತೀರ್ಮಾನಿಸಿದ್ದು.ಅರ್ಹ ಫಲಾನುಭವಿಗಳಿಗೆ ಅಕ್ಕಿಯನ್ನು ವಿತರಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಜಿಲ್ಲಾಧಿಕಾರಿಗಳು ನೇರವಾಗಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು.ರಾಗಿ ಖರೀದಿ ಕೇಂದ್ರಗಳಲ್ಲಿ ತೂಕದ ವ್ಯತ್ಯಾಸಗಳು ಕಂಡುಬರದಂತೆ ನಿಗಾ ವಹಿಸಬೇಕು. ಯಾವುದೇ ಲೋಪಗಳು ಕಂಡುಬಂದಲ್ಲಿ, ಅಧಿಕಾರಿಗಳನ್ನು ಸ್ಥಳದಲ್ಲಿಯೇ ಅಮಾನತ್ತುಗೊಳಿಸಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.
ಕನಿಷ್ಠ ಬೆಂಬಲ ಬೆಲೆ (MSP) ಯೋಜನೆಯಡಿ ರೈತರಿಂದ ಖರೀದಿಸುವ ರಾಗಿ, ಜೋಳ, ಮತ್ತು ಭತ್ತದ ಗುಣಮಟ್ಟವನ್ನು ಕಾಪಾಡಬೇಕು. ಪ್ರತಿ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಯೇ MSP ಅಧ್ಯಕ್ಷರಿದ್ದು, ಆಹಾರ ಧಾನ್ಯಗಳ ಗುಣಮಟ್ಟದಲ್ಲಿ ವ್ಯತ್ಯಾಸ ಕಂಡುಬಂದಲ್ಲಿ ಅಧಿಕಾರಿಗಳನ್ನು ಸ್ಥಳದಲ್ಲಿಯೇ ಅವರ ಮೇಲೆ ಕ್ರಮ ತೆಗೆದುಕೊಳ್ಳುವಂತೆ ಸೂಚನೆ ನೀಡಿದರು.
ಪ್ರತಿ ಕ್ವಿಂಟಾಲ್ ರಾಗಿಗೆ ₹4,290, ಹೈಬ್ರೀಡ್ ಜೋಳಕ್ಕೆ ₹3,371, ಮಾಲದಂಡಿ ಜೋಳಕ್ಕೆ ₹3,421, ಮತ್ತು ಭತ್ತಕ್ಕೆ ಸಾಮಾನ್ಯ ಗುಣಮಟ್ಟದಲ್ಲಿ ₹2,300 ಹಾಗೂ ಗ್ರೇಡ್ ಎ ಭತ್ತಕ್ಕೆ ₹2,320 ಧರ ನಿಗದಿಯಾಗಿದ್ದು. ಈ ಧರದಲ್ಲಿ ರೈತರಿಂದ ಧಾನ್ಯಗಳನ್ನು ಖರೀದಿಸಿ, ಅವರಿಗೆ ಸರಿಯಾದ ಸಮಯಕ್ಕೆ ಹಣ ಸಂದಾಯ ಮಾಡಬೇಕು
ಜಿಲ್ಲಾಧಿಕಾರಿಗಳು ಖರೀದಿ ಕೇಂದ್ರಗಳ ಸ್ಥಳಗಳಲ್ಲಿ ರೈತರಿಗೆ ಕುಡಿಯುವ ನೀರು ಮತ್ತು ಶಾಮಿಯಾಣದ (ಛಾವಣಿ) ವ್ಯವಸ್ಥೆಯನ್ನು ಕಲ್ಪಿಸಬೇಕು ಏಕೆಂದರೆ ಮಾರ್ಚ್ ತಿಂಗಳಲ್ಲಿ ಹೆಚ್ಚಿನ ಬಿಸಿಲು ಇರುವುದರಿಂದ ರೈತರಿಗೆ ಅನುಕೂಲಕರವಾದ ವಾತಾವರಣ ನಿರ್ಮಿಸಬೇಕು ಎಂದರು.