ಮಂಗಳೂರು : ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹಕಗಳ ಜೊತೆಗೆ 10 ಸಾವಿರ ರೂ.ಗಳ ಗೌರವಧನ ನೀಡಲು ಸರ್ಕಾರ ಒಪ್ಪಿದೆ. ಒಂದು ವೇಳೆ 10 ಸಾವಿರಗಳಷ್ಟು ಪ್ರೋತ್ಸಾಹಕಗಳು ಬಾರದೆ ಹೋದರೆ ಸರ್ಕಾರವೇ ಅದನ್ನು ಭರಿಸಲಿದೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಿಸಿದ್ದಾರೆ. ಈ ಮೂಲಕ ರಾಜ್ಯದ ಆಶಾ ಕಾರ್ಯಕರ್ತೆಯರಿಗೆ ಮತ್ತೊಂದು ಗುಡ್ ನ್ಯೂಸ್ ನೀಡಿದ್ದಾರೆ.
ನಕ್ಸಲರು ಮುಖ್ಯವಾಹಿನಿಗೆ ಬರಬೇಕು
ಆರು ನಕ್ಸಲರು ಶರಣಾಗಿದ್ದು ಅವರನ್ನು ಕಾಡಿನಿಂದ ನ್ಯಾಯಾಲಯಕ್ಕೆ ಕರೆತಂದು, ಅಲ್ಲಿಂದ ನಾಡಿಗೆ ಕರೆತರುವ ಪ್ರಯತ್ನ ಮಾಡಿದ್ದು, ನಕ್ಸಲರು ಶಸ್ತ್ರಾಸ್ತ್ರ ಹೋರಾಟ ನಿಲ್ಲಿಸಿ ಮುಖ್ಯವಾಹಿನಿಗೆ ಬರಬೇಕು. ಶಾಂತಿಯುತ ಹೋರಾಟಕ್ಕೆ ನಮ್ಮ ತಕರಾರೇನಿಲ್ಲ. ಸಂವಿಧಾನದಲ್ಲಿ ಶಾಂತಿಯುತ ಹೋರಾಟಕ್ಕೆ ಅವಕಾಶವಿದ್ದು, ಅದರಂತೆ ಹೋರಾಟ ಮಾಡಿದರೆ ಅದಕ್ಕೆ ಸಹಕಾರವಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ನಕ್ಸಲರ ಶರಣಾಗತಿಯ ಬಗ್ಗೆ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ ಅವರು ಜಿಲ್ಲಾ ವರಿಷ್ಠಾಧಿಕಾರಿಯಾಗಿದ್ದ ಸಂದರ್ಭದಲ್ಲಿ ಸರ್ಕಾರಿ ನೌಕರರಾಗಿದ್ದರು. ಈಗ ರಾಜಕೀಯದಲ್ಲಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದು ಅವರಿಂದ ನಾವೇನು ನಿರೀಕ್ಷೆ ಮಾಡಲು ಸಾಧ್ಯ ಎಂದರು.
BREAKING : 11 ಮಂದಿ `DYSP’ (ಸಿವಿಲ್) ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ | DYSP Transfer
ಸಾರ್ವಜನಿಕರಿಗೆ ಉಪಯುಕ್ತ ಮಾಹಿತಿ: ‘ಸ್ವರ್ಣ ಪ್ರಾಶನ’ ಮಕ್ಕಳ ಸದೃಢ ಆರೋಗ್ಯಕ್ಕೆ ಸಹಕಾರಿಯೇ? ಇಲ್ಲಿದೆ ಮಾಹಿತಿ