ಬೆಂಗಳೂರು: ರಾಜ್ಯ ಸರ್ಕಾರವು ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಜೀವ ಸಾರ್ಥಕತೆ ಅಂಗಾಂಗ ಕಸಿ ಯೋಜನೆಯಡಿ ಶ್ವಾಸಕೋಶ, ಹೃದಯ ಮತ್ತು ಮೂಳೆ ಮಜ್ಜೆ ಕಸಿಯನ್ನೂ ಸೇರಿಸಿ ಅಂಗಾಂಗ ಕಸಿ ಯೋಜನೆಯನ್ನು ವಿಸ್ತರಿಸಲು ಆರೋಗ್ಯ ಇಲಾಖೆ ಬುಧವಾರ ಆದೇಶ ಹೊರಡಿಸಿದೆ.
ಜನವರಿ 16ರಂದು ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ 2018ರಿಂದ ಬಡತನ ರೇಖೆಗಿಂತ ಕೆಳಗಿರುವ ನಾಗರಿಕರಿಗಾಗಿ (ಆದ್ಯತಾ ವಲಯ) ಜಾರಿಯಲ್ಲಿರುವ ಅಂಗಾಂಗ ಕಸಿ ಯೋಜನೆಗೆ ಶ್ವಾಸಕೋಶ, ಹೃದಯ ಮತ್ತು ಮೂಳೆ ಮಜ್ಜೆ ಕಸಿ ಸೇರಿಸಲು ನಿರ್ಧಾರ ಮಾಡಲಾಗಿತ್ತು. ಇದರಡಿ ಯಲ್ಲಿಯೇ ಯೋಜನೆಯನ್ನು ವಿಸ್ತರಣೆ ಮಾಡಿ ಅಂಗಾಂಗ ಕಸಿ, ಇಮ್ಯುನೋಸಪ್ರೆಶನ್ ಔಷಧಿಗಳ ಖರೀದಿಯನ್ನು ಅತಿ ವಿರಳ ಮತ್ತು ದುಬಾರಿ ವೆಚ್ಚದ ಚಿಕಿತ್ಸಾ ವಿಧಾನಗಳ ಯೋಜನೆಯಲ್ಲಿ ವ್ಯಾಖ್ಯಾನಿಸಲಾದ ಷರತ್ತುಗಳ ಅನ್ವಯ ಅನುಷ್ಠಾನಗೊಳಿಸಲು ಬುಧವಾರ ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಿದೆ. ಈ ಮೂಲಕ ಬಿಪಿಎಲ್ ಕಾರ್ಡ್ ದಾರರಿಗೆ ಮತ್ತೊಂದು ಸಿಹಿಸುದ್ದಿ ನೀಡಿದೆ.