ಬೆಂಗಳೂರು : ರಾಜ್ಯ ಸರ್ಕಾರವು ಪ್ರೌಢಶಾಲಾ ಮಕ್ಕಳಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ತಂತ್ರಜ್ಞಾನ ಆಧಾರಿತ ಕಲಿಕೆಗಾಗಿ ಪ್ರಸಕ್ತ ಸಾಲಿನ ಟೆಕ್ನಿಕಲ್ ಅಸಿಸ್ಟೆಡ್ ಲರ್ನಿಂಗ್ ಪ್ರೋಗ್ರಾಮ್ ಅಡಿ ರಾಜ್ಯದ 31 ಜಿಲ್ಲೆಗಳ ಆಯ್ದ 178 ಸರ್ಕಾರಿ ಪ್ರೌಢಶಾಲೆಗಳಲ್ಲಿ ಮಾದರಿ ಕಂಪ್ಯೂಟರ್ ಲ್ಯಾಬ್ ಗಳ ಸ್ಥಾಪನೆಗೆ ನಿರ್ಧರಿಸಿದೆ.
ಹೌದು, ತಂತ್ರಜ್ಞಾನ ಆಧಾರಿತ ಕಲಿಕೆಗಾಗಿ ಪ್ರಸಕ್ತ ಸಾಲಿನ ಟೆಕ್ನಿಕಲ್ ಅಸಿಸ್ಟೆಡ್ ಲರ್ನಿಂಗ್ ಪ್ರೋಗ್ರಾಮ್ ಅಡಿ ಈಗಾಗಲೇ ಚಾಮರಾಜನಗರ, ಕಲಬುರಗಿ, ಬೀದರ್, ರಾಯಚೂರು, ಮಧುಗಿರಿ, ಕೊಡಗು, ಉತ್ತರ ಕನ್ನಡ, ವಿಜಯನಗರ, ಜಿಲ್ಲೆಗಳಿಗೆ ತಲಾ 5 ಶಾಲೆಗಳಿಗೆ ಕಂಪ್ಯೂಟರ್ ಮಂಜೂರು ಮಾಡಲಾಗಿದೆ.
ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಗ್ರಾಮಾಂತರ, ಬಾಗಲಕೋಟೆ, ಬೆಳಗಾವಿ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ದಕ್ಷಿಣ ಕನ್ನಡ, ಧಾರವಾಡ, ಗದಗ, ಹಾಸನ, ಕೊಪ್ಪಳ, ಕೋಲಾರ, ಮೈಸೂರು, ಶಿವಮೊಗ್ಗ, ಶಿರಸಿ, ತುಮಕೂರು, ಉಡುಪಿ, ವಿಜಯಪುರ, ಯಾದಗಿರಿ ಜಿಲ್ಲೆಗಳಿಗೆ ತಲಾ ಆರು ಪ್ರೌಢಶಾಲೆಗಳಲ್ಲಿ ಕಂಪ್ಯೂಟರ್ ಲ್ಯಾಬ್ ಮಂಜೂರಾಗಿದೆ.ಹೆಚ್ಚಿನ ಸಂಖ್ಯೆಯಲ್ಲಿರುವ ವಿದ್ಯಾರ್ಥಿಗಳು ಇರುವ ಪ್ರತ್ಯೇಕ ಕೊಠಡಿ ಹೊಂದಿರುವ ಮತ್ತು ಕಂಪ್ಯೂಟರ್ ಲ್ಯಾಬ್ ಇಲ್ಲದ ಸರ್ಕಾರಿ ಪ್ರೌಢಶಾಲೆಗಳನ್ನು ಗುರುತಿಸಿ ಕೂಡಲೇ ಪಟ್ಟಿ ಕಳುಹಿಸಿಕೊಡುವಂತೆ ಡಯಟ್ ಪ್ರಾಂಶುಪಾಲರಿಗೆ ನಿರ್ದೇಶನ ನೀಡಲಾಗಿದೆ.