ನವದೆಹಲಿ : ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರೈತ ಸಮುದಾಯಕ್ಕೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಕೃಷಿ ಸಾಲದ ಮಿತಿಯನ್ನು ₹2 ಲಕ್ಷಕ್ಕೆ ಏರಿಕೆ ಮಾಡಿದೆ.
ಹೌದು, ರೈತರ ಕೃಷಿ ಚಟುವಟಿಕೆಗಳಿಗೆ ಕಿಸಾನ್ ಸಮ್ಮಾನ್ ಯೋಜನೆ ಮೂಲಕ ನೆರವಾದ ಪ್ರಧಾನಿ ನರೇಂದ್ರ ಮೋದಿಯವರ ಸರ್ಕಾರ ಇದೀಗ ಕೃಷಿ ಸಾಲದ ಮಿತಿಯನ್ನು ₹2 ಲಕ್ಷಕ್ಕೆ ಏರಿಕೆ ಮಾಡಿದೆ. ಅಡಮಾನ ರಹಿತ ಕೃಷಿ ಸಾಲದ ಮಿತಿಯನ್ನು ಕೇಂದ್ರ ಬಿಜೆಪಿ ಸರ್ಕಾರ ಈ ಹಿಂದೆ ₹1 ಲಕ್ಷದಿಂದ ₹1.6 ಲಕ್ಷಕ್ಕೆ ಏರಿಕೆ ಮಾಡಿತ್ತು. ಇದೀಗ ಮತ್ತೊಮ್ಮೆ ₹2 ಲಕ್ಷಕ್ಕೆ ಏರಿಸುವ ಮೂಲಕ ರೈತರು ಕೃಷಿ ಚಟುವಟಿಕೆಗಳಿಗೆ ಹೆಚ್ಚಿನ ಸಾಲ ಪಡೆಯಲು ಅನುಕೂಲ ಮಾಡಿಕೊಟ್ಟಿದೆ.
ಹಣದುಬ್ಬರ ಮತ್ತು ಕೃಷಿಯಲ್ಲಿ ಬಳಸುವ ಕಚ್ಚಾ ವಸ್ತುಗಳ ಬೆಲೆಯಲ್ಲಿನ ಹೆಚ್ಚಳವನ್ನು ಗಮನದಲ್ಲಿಟ್ಟುಕೊಂಡು ಗ್ಯಾರಂಟಿ ರಹಿತ ಕೃಷಿ ಸಾಲದ ಮಿತಿಯನ್ನು 1.6 ಲಕ್ಷದಿಂದ ರೂ. 2 ಲಕ್ಷ” ಎಂದು ನಿರ್ಧರಿಸಲಾಗಿದೆ. ಇದರಿಂದ ಸಣ್ಣ ಮತ್ತು ಅತಿಸಣ್ಣ ರೈತರು ಹಣಕಾಸು ಸಂಸ್ಥೆಗಳಿಂದ ಸಾಲ ಪಡೆಯುವ ವ್ಯಾಪ್ತಿ ಹೆಚ್ಚಲಿದೆ ಎಂದರು. 2010ರಲ್ಲಿ ಆರ್‌ಬಿಐ ಯಾವುದೇ ಗ್ಯಾರಂಟಿ ಇಲ್ಲದೆ ಕೃಷಿ ಕ್ಷೇತ್ರಕ್ಕೆ 1 ಲಕ್ಷ ರೂ.ಗಳ ಮಿತಿಯನ್ನು ನಿಗದಿಪಡಿಸಿತ್ತು ಎಂಬುದು ಗಮನಾರ್ಹ. ನಂತರ, 2019 ರಲ್ಲಿ ಅದನ್ನು 1.6 ಲಕ್ಷ ರೂ.ಗೆ ಹೆಚ್ಚಿಸಲಾಯಿತು. ಈ ಸಂಬಂಧ ಶೀಘ್ರದಲ್ಲೇ ಸುತ್ತೋಲೆ ಹೊರಡಿಸಲಾಗುವುದು ಎಂದು ಆರ್‌ಬಿಐ ತಿಳಿಸಿದೆ.