Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಇಸ್ರೇಲ್ ಒತ್ತಡದಿಂದ ಅಮೆರಿಕ ಯುದ್ಧ ಆರಂಭಿಸಿತು : ‘ಟ್ರಂಪ್’ರ ‘ಭಯೋತ್ಪಾದನಾ ನಿಗ್ರಹ ಮುಖ್ಯಸ್ಥ’ ರಾಜೀನಾಮೆ

17/03/2026 7:58 PM

BREAKING: ಕರ್ನಾಟಕ ದ್ವಿತೀಯ PUC ಪರೀಕ್ಷೆ-2ರ ಪರಿಷ್ಕೃತ ವೇಳಾಪಟ್ಟಿ ಪ್ರಕಟ: ಏ.25ರಿಂದ ಪರೀಕ್ಷೆ ಆರಂಭ

17/03/2026 7:47 PM

ಕೇರಳ ವಿಧಾನಸಭಾ ಚುನಾವಣೆ 2026: ಕಾಂಗ್ರೆಸ್ ಪಕ್ಷದಿಂದ 55 ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟ

17/03/2026 7:36 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ರೈತರಿಗೆ ಮತ್ತೊಂದು ಗುಡ್ ನ್ಯೂಸ್ : ಸರ್ಕಾರದಿಂದ 2.5 ಲಕ್ಷ `ಅಕ್ರಮ ಪಂಪ್ ಸೆಟ್’ಗಳು `ಸಕ್ರಮ’ ಎಂದು ಘೋಷಣೆ.!
KARNATAKA

ರಾಜ್ಯದ ರೈತರಿಗೆ ಮತ್ತೊಂದು ಗುಡ್ ನ್ಯೂಸ್ : ಸರ್ಕಾರದಿಂದ 2.5 ಲಕ್ಷ `ಅಕ್ರಮ ಪಂಪ್ ಸೆಟ್’ಗಳು `ಸಕ್ರಮ’ ಎಂದು ಘೋಷಣೆ.!

By kannadanewsnow5723/01/2025 9:07 AM

ವಿಜಯಪುರ : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ 2.5 ಲಕ್ಷ ಅಕ್ರಮ ಪಂಪ್ ಸೆಟ್ ಗಳನ್ನು ಸಕ್ರಮಗೊಳಿಸಲಾಗಿದ್ದು, ಬಾಕಿ ಇರುವ 2 ಲಕ್ಷ ಪಂಪ್ ಸೆಟ್ ಗಳನ್ನು ಇನ್ನೊಂದು ವರ್ಷದಲ್ಲಿ ಸಕ್ರಮಗೊಳಿಸಲಾಗುವುದು ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಇಂಧನ ಇಲಾಖೆಗೆ ಸಂಬಂಧಿಸಿದಂತೆ ಜಿಲ್ಲೆಯ ಜನಪ್ರತಿಧಿಗಳು ಹಾಗೂ ಇಲಾಖೆ ಅಧಿಕಾರಿಗಳೊಂದಿಗಿನ ಸಭೆಯಲ್ಲಿ ಮಾತನಾಡಿದ ಅವರು, “ಅಕ್ರಮ ಪಂಪ್ ಸೆಟ್ ಗಳ ಸಕ್ರಮ ಯೋಜನೆ 2004ರಿಂದಲೇ ಜಾರಿಯಲ್ಲಿದ್ದು, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗ ಈ ಯೋಜನೆಯಡಿ 4.5 ಲಕ್ಷ ಅರ್ಜಿಗು ಬಾಕಿ ಇದ್ದವು. ಪ್ರಸ್ತುತ 2.5 ಲಕ್ಷ ಪಂಪ್ ಸೆಟ್ ಗಳನ್ನು ಅಕ್ರಮಗೊಳಿಸಲಾಗಿದೆ. ಬಾಕಿ ಉಳಿದ ಅರ್ಜಿಗಳನ್ನು ಇತ್ಯರ್ಥಗೊಳಿಸಿದ ಬಳಿಕ ಹೊಸದಾಗಿ ಬಂದ ಅರ್ಜಿಗಳ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾ ಕೈಗೊಳ್ಳಲಾಗುವುದು,” ಎಂದರು.

“ರೈತರಿಗೆ ನಿರಂತರ 7 ಗಂಟೆ ಸೇರಿದಂತೆ ರಾಜ್ಯದ ಜನರಿಗೆ ದಿನದ 24 ಗಂಟೆಗಳ ಕಾಲ ವಿದ್ಯುತ್‌ ಪೂರೈಸಲಾಗುತ್ತಿದೆ.ವಿಜಯಪುರ ಜಿಲ್ಲೆಯಲ್ಲಿ 353 ಕೃಷಿ ಮಾರ್ಗಗಳಿಗೆ ಹಗಲು ವೇಳೆ 7 ಗಂಟೆ 3 ಫೇಸ್, 165 ಮಾರ್ಗಗಳಲ್ಲಿ ಹಗಲು 4 ಗಂಟೆ ರಾತ್ರಿ 3 ಮೂರು ಗಂಟೆಗಳ ಕಾಲ , 42 ಕೃಷಿ ಮಾರ್ಗದಲ್ಲಿ ಹಗಲು 3 ಮತ್ತು ರಾತ್ರಿ 4 ಗಂಟೆಗಳ ಕಾಲ ತ್ರೀ ಫೇಸ್ ಹಾಗೂ 43 ಕೃಷಿ ಮಾರ್ಗಗಳಲ್ಲಿ ಹಗಲು 3 ಗಂಟೆ ರಾತ್ರಿ 3 ಗಂಟೆಗಳ ಕಾಲ ತ್ರೀ ಫೇಸ್ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ”, ಎಂದು ಸಚಿವರು ಮಾಹಿತಿ ನೀಡಿದರು.

“ರಾಜ್ಯದಲ್ಲಿ ಕುಸುಮ್-ಬಿ ಯೋಜನೆಯಡಿ ರೈತರಿಗೆ ಶೇ. 80ರ ಸಬ್ಸಿಡಿ ದರದಲ್ಲಿ ಸೋಲಾರ್ ಪಂಪ್ ಸೆಟ್ ಒದಗಿಸುವುದು ಮತ್ತು ಕುಸುಮ್‌- ಸಿ ಯೋಜನೆಯಡಿ ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಸುವ ಫೀಡರ್ ಗಳ ಸೋಲರೈಸೇಷನ್ ಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ವಿದ್ಯುತ್ ಫೀಡರ್ ಗಳಿಂದ 500 ಮೀಟರ್ ಗಿಂತ ಹೆಚ್ಚು ಅಂತರದಲ್ಲಿರುವ ಕೃಷಿ ಪಂಪ್ ಸೆಟ್ ಗಳನ್ನು ಸೋಲಾರ್ ವಿದ್ಯುತ್ ಪಂಪ್ ಸೆಟ್ ಗಳಾಗಿ ಪರಿವರ್ತಿಸಲಾಗುತ್ತಿದೆ. ಇದರಿಂದ ರೈತರಿಗೆ ಹೆಚ್ಚಿನ ಅನುಕೂಲಗಳಾಗಿವೆ”, ಎಂದರು.

ಜನಪ್ರತಿನಿಧಗಳೊಂದಿಗೆ ನಿರಂತರ ಸಂಪರ್ಕ ಅಗತ್ಯ
ಜನರು ತಮ್ಮ ಸಮಸ್ಯೆಗಳನ್ನು ಹೇಳಿಕೊಂಡು ಜನಪ್ರತಿನಿಧಿಗಳ ಬಳಿ ಬರುತ್ತಾರೆ. ಹೀಗಾಗಿ ವಿದ್ಯುತ್ ಸಮಸ್ಯೆಗಳ ಬಗ್ಗೆಯೂ ಅವರಿಗೆ ಹೆಚ್ಚಿನ ಮಾಹಿತಿ ಇರುತ್ತದೆ. ಹೀಗಾಗಿ ಹೆಸ್ಕಾಂ ಇಂಜಿನಿಯರ್ ಗಳು, ಲೈನ್ ಮ್ಯಾನ್ ಗಳು ತಮ್ಮ ವ್ಯಾಪ್ತಿಯ ಜನಪ್ರತಿನಿಧಿಗಳೊದಿಗೆ ನೇರ ಸಂಪರ್ಕದಲ್ಲಿದ್ದುಕೊಂಡು ಸ್ಥೀಯ ಮಟ್ಟ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.

ಇಂಡಿ ಕ್ಷೇತ್ರದ ಶಾಸಕ ಯಶವಂತರಾಯ ಗೌಡ ಮಾತನಾಡಿ, ಜನರಿಗೆ ವಿದ್ಯುತ್ ಸಮಪರ್ಕವಾಗಿ ಪೂರೈಕೆಯಾಗಲು ಕ್ರಮ ಕೈಗೊಳ್ಳಯವುದರ ಜತೆಗೆ ವಿದ್ಯುತ್ ಕಾಮಗಾರಿ ವಿಳಂಬವಾಗದಂತೆ ನೋಡಿಕೊಳ್ಳಬೇಕು. ಕುಡಿಯುವ ನೀರಿಗೆ ವಿದ್ಯುತ್ ವ್ಯವಸ್ಥೆ ಸಮರ್ಪಕವಾಗಿ ಪೂರೈಕೆಯಾಗಬೇಕು. ಹಳೆಯ ಕಂಬ, ವೈರ್‌ ಗಳನ್ನು ಬದಲಿಸಬೇಕು ಎಂದು ಹೇಳಿದಾಗ, ಈ ಬಗ್ಗೆ ಗಮನಹರಿಸುವಂತೆ ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ, ಸಂಸದ ರಮೇಶ್ ಜಿಗಜಿಣಗಿ, ಶಾಸಕರಾದ ಅಶೋಕ ಮಲ್ಲಪ್ಪ ಮನಗೂಳಿ, ಭೀಮನಗೌಡ (ರಾಜುಗೌಡ) ಬಸನ ಗೌಡ ಪಾಟೀಲ್, ವಿಠ್ಠಲ್ ದೊಂಡಿಬಾ ಕಟಕದೊಂಡ, ಕರ್ನಾಟಕ ಬಾಲ ವಿಕಾಸ ಅಕಾಡೆಮಿಯ ಅಧ್ಯಕ್ಷ ಸಂಗಮೇಶ ಅಪ್ಪಾಸಿ ಬಬಲೇಶ್ವರ್, ಮಹಾನಗರ ಪಾಲಿಕೆಯ ಮೇಯರ್ ಮಹೇಜಬಿನ ಅಬ್ದುಲರಜಾಕ್ ಹೊರ್ತಿ, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಕನಾನ ಅಬ್ದುಲ್ ಹಮೀನ್ ಮುಶ್ರೀಪ್, ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಪಂಕಜ್ ಕುಮಾರ್ ಪಾಂಡೆ, ಜಿಲ್ಲಾಧಿಕಾರಿ ಟಿ.ಭೂಬಾಲನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ರಿಷಿ ಆನಂದ, ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕಿ ವೈಶಾಲಿ ಎಂ.ಎಲ್., ತಾಂತ್ರಿಕ ನಿರ್ದೇಶಕ ಜಗದೀಶ ಸಾವಳಗಿ, ಹೆಸ್ಕಾಂ ಹಾಗೂ ಕೆಪಿಟಿಸಿಎಲ್ ಅಧಿಕಾರಿಗಳು ಪಾಲ್ಗೊಂಡಿದ್ದರು.

Another good news for farmers in the state: Govt declares 2.5 lakh 'illegal pump sets' as 'regular' ರಾಜ್ಯದ ರೈತರಿಗೆ ಮತ್ತೊಂದು ಗುಡ್‌ನ್ಯೂಸ್‌: 4 ಲಕ್ಷ ರೈತರ ಕೃಷಿ ಪಂಪ್ ಸೆಟ್‍ಗಳಿಗೆ ಮೂಲಭೂತ ಸೌಕರ್ಯ: ಇಂಧನ ಸಚಿವ ಕೆ.ಜೆ.ಜಾರ್ಜ್
Share. Facebook Twitter LinkedIn WhatsApp Email

Related Posts

BREAKING: ಕರ್ನಾಟಕ ದ್ವಿತೀಯ PUC ಪರೀಕ್ಷೆ-2ರ ಪರಿಷ್ಕೃತ ವೇಳಾಪಟ್ಟಿ ಪ್ರಕಟ: ಏ.25ರಿಂದ ಪರೀಕ್ಷೆ ಆರಂಭ

17/03/2026 7:47 PM1 Min Read

GOOD NEWS: ಗ್ರಾಮೀಣ ಆರೋಗ್ಯ ಸೇವೆಗೆ ‘ಇ-ಬೈಕ್’ ವೇಗ: ಹಳ್ಳಿಗಳ ಮನೆಬಾಗಿಲಿಗೆ ತಲುಪಲಿದೆ ‘ವೈದ್ಯಕೀಯ ಆಸರೆ’

17/03/2026 7:31 PM2 Mins Read

BREAKING: ಲೈಂಗಿಕ ಕಿರುಕುಳ ಆರೋಪದಡಿ ‘ಮೂಡಬಿದ್ರೆ ಠಾಣೆ ಇನ್ಸ್ ಪೆಕ್ಟರ್ ಸಂದೇಶ್’ ಸಸ್ಪೆಂಡ್

17/03/2026 7:24 PM1 Min Read
Recent News

BREAKING : ಇಸ್ರೇಲ್ ಒತ್ತಡದಿಂದ ಅಮೆರಿಕ ಯುದ್ಧ ಆರಂಭಿಸಿತು : ‘ಟ್ರಂಪ್’ರ ‘ಭಯೋತ್ಪಾದನಾ ನಿಗ್ರಹ ಮುಖ್ಯಸ್ಥ’ ರಾಜೀನಾಮೆ

17/03/2026 7:58 PM

BREAKING: ಕರ್ನಾಟಕ ದ್ವಿತೀಯ PUC ಪರೀಕ್ಷೆ-2ರ ಪರಿಷ್ಕೃತ ವೇಳಾಪಟ್ಟಿ ಪ್ರಕಟ: ಏ.25ರಿಂದ ಪರೀಕ್ಷೆ ಆರಂಭ

17/03/2026 7:47 PM

ಕೇರಳ ವಿಧಾನಸಭಾ ಚುನಾವಣೆ 2026: ಕಾಂಗ್ರೆಸ್ ಪಕ್ಷದಿಂದ 55 ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟ

17/03/2026 7:36 PM

GOOD NEWS: ಗ್ರಾಮೀಣ ಆರೋಗ್ಯ ಸೇವೆಗೆ ‘ಇ-ಬೈಕ್’ ವೇಗ: ಹಳ್ಳಿಗಳ ಮನೆಬಾಗಿಲಿಗೆ ತಲುಪಲಿದೆ ‘ವೈದ್ಯಕೀಯ ಆಸರೆ’

17/03/2026 7:31 PM
State News
KARNATAKA

BREAKING: ಕರ್ನಾಟಕ ದ್ವಿತೀಯ PUC ಪರೀಕ್ಷೆ-2ರ ಪರಿಷ್ಕೃತ ವೇಳಾಪಟ್ಟಿ ಪ್ರಕಟ: ಏ.25ರಿಂದ ಪರೀಕ್ಷೆ ಆರಂಭ

By kannadanewsnow0917/03/2026 7:47 PM KARNATAKA 1 Min Read

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯು 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-2ರ ಪರಿಷ್ಕೃತ ವೇಳಾಪಟ್ಟಿಯನ್ನು ಅಧಿಕೃತವಾಗಿ…

GOOD NEWS: ಗ್ರಾಮೀಣ ಆರೋಗ್ಯ ಸೇವೆಗೆ ‘ಇ-ಬೈಕ್’ ವೇಗ: ಹಳ್ಳಿಗಳ ಮನೆಬಾಗಿಲಿಗೆ ತಲುಪಲಿದೆ ‘ವೈದ್ಯಕೀಯ ಆಸರೆ’

17/03/2026 7:31 PM

BREAKING: ಲೈಂಗಿಕ ಕಿರುಕುಳ ಆರೋಪದಡಿ ‘ಮೂಡಬಿದ್ರೆ ಠಾಣೆ ಇನ್ಸ್ ಪೆಕ್ಟರ್ ಸಂದೇಶ್’ ಸಸ್ಪೆಂಡ್

17/03/2026 7:24 PM

ಹೆಚ್.ಡಿ.ದೇವೇಗೌಡರ ಮನವಿಗೆ ಕೇಂದ್ರದ ಸ್ಪಂದನೆ: ಎತ್ತಿನಹೊಳೆ ಯೋಜನೆಗೆ ಅರಣ್ಯ ಪ್ರದೇಶ ಬಳಕೆಗೆ ಗ್ರೀನ್ ಸಿಗ್ನಲ್

17/03/2026 7:18 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.