ಉಡುಪಿ: 48 ಯುನಿಟ್‌ಗಿಂತ ಕಡಿಮೆ ವಿದ್ಯುತ್ ಬಳಕೆ ಮಾಡುವವರಿಗೆ ಶೇ.10ರ ಬದಲು 10 ಯುನಿಟ್ ಕೊಡಲು ರಾಜ್ಯ ಸರ್ಕಾರ ತೀರ್ಮಾನ ಮಾಡಲಾಗಿದೆ ಅಂತ ರಾಜ್ಯ ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಅವರು ಉಡುಪಿ ಮುಸ್ಲಿಂ ವೆಲ್‌ಫೇರ್ ಅಸೋಸಿಯೇಶನ್ ವತಿಯಿಂದ ಮಣಿಪಾಲ ಕೆಎಂಸಿ ಬ್ಲಡ್ ಬ್ಯಾಂಕ್ ಸಹಯೋಗದಲ್ಲಿ ಉಡುಪಿ ಜಾಮಿಯಾ ಮಸೀದಿ ಆವರಣದಲ್ಲಿ ಇಂದು ಏರ್ಪಡಿಸಲಾದ ರಕ್ತದಾನ ಶಿಬಿರದಲ್ಲಿ ಭಾಗವಹಿಸಿ ಮಾತನಾಡಿದರು.
ಇದೇ ವೇಳೆ ಅವರು ಮಾತನಾಡುತ್ತ, ಗೃಹಜ್ಯೋತಿ ಯೋಜನೆಯಡಿ ಕಡಿಮೆ ವಿದ್ಯುತ್ ಬಳಸುವವರಿಗೆ ಯಾವುದೇ ಲಾಭ ಸಿಗುತ್ತಿಲ್ಲ. 15 -20 ಯುನಿಟ್ ವಿದ್ಯುತ್ ಬಳಕೆದಾರರಿಗೆ ಶೇಕಡ 10ರಷ್ಟು ಅಂದರೆ 1.5 ಯುನಿಟ್ ಹೆಚ್ಚುವರಿ ವಿದ್ಯುತ್ ಮಾತ್ರ ಸಿಗುತ್ತಿದೆ. ಹೀಗಾಗಿ 48 ಯುನಿಟ್ ಗಿಂತ ಕಡಿಮೆ ವಿದ್ಯುತ್ ಬಳಕೆ ಮಾಡುವವರಿಗೆ ಶೇಕಡ 10ರ ಬದಲು 10 ಯುನಿಟ್ ಕೊಡಲು ತೀರ್ಮಾನ ಮಾಡಲಾಗಿದೆ ಅಂತ ತಿಳಿಸಿದರು.